Advertisement

ರೈತರ ಆದಾಯ ದ್ವಿಗುಣಗೊಳಿಸಲು ಒಡಂಬಡಿಕೆ: ಸಿಎಂ ಬೊಮ್ಮಾಯಿ

10:13 PM Oct 08, 2022 | Team Udayavani |

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಶಾ ಫೌಂಡೇಶನ್‌ ಜತೆ ಒಡಂಬಡಿಕೆ ಮಾಡಿಕೊಳ್ಳಲು ಸರಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಸಮೀಪ ಈಶಾ ಫೌಂಡೇಶನ್‌ ವತಿಯಿಂದ ನಾಗಮಂಟಪ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಕೊಂಡಿದೆ. ಅದೇ ಮಾದರಿಯಲ್ಲಿ ಈಶಾ ಫೌಂಡೇಶನ್‌ ಕೂಡ ರೈತರ ಆದಾಯವನ್ನು ದ್ವಿಗುಣಗೊಳಿಸಲು ಆಸಕ್ತಿ ಹೊಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೇ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಸರಕಾರ ಸನ್ನದ್ಧವಾಗಿದೆ ಎಂದರು.

ಸದ್ಗುರುಗಳು ಕಾರ್ಮಿಕರ ಶ್ರಮ ಹಾಗೂ ರೈತರಿಗೆ ಬೆಲೆ ಕೊಡುವ ಮಾತಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರ ಆದಾಯವನ್ನು ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ಸದ್ಗುರು ಜಗ್ಗಿ ವಾಸುದೇವ್‌, ಸಚಿವ ಡಾ| ಕೆ. ಸುಧಾಕರ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next