Advertisement
ಕೇಂದ್ರ ಸರಕಾರದ ಪ್ರಸ್ತಾವನೆಯಂತೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ವಿಶ್ವಸಂಸ್ಥೆ ಘೋಷಿಸಿದ ಹಿನ್ನೆಲೆಯಲ್ಲಿ ಅದರ ಆಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ “ಸಿರಿಧಾನ್ಯ ಮತ್ತು ಸಾವಯವ-ಅಂತಾರಾಷ್ಟ್ರೀಯ ವಾಣಿಜ್ಯ ಮೇಳ:2023’ಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
Related Articles
ರಾಜ್ಯ ಸರಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದೆ. 3 ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗಿದ್ದು, ಇದೊಂದು ದಾಖಲೆ. ರೈತಶಕ್ತಿ ಯೋಜನೆ 10 ದಿನಗಳಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರು ಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. 10 ಎಚ್.ಪಿ. ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
Advertisement
ಸಿರಿಧಾನ್ಯ ರಾಯಭಾರಿನಾನು ಸಿರಿಧಾನ್ಯ ರಾಯಭಾರಿ ಎಂದು ಹೇಳಿದ ಸಿಎಂ ಬೊಮ್ಮಾಯಿ, ಕಳೆದ 30 ವರ್ಷಗಳಿಂದ ಅನ್ನ ಸೇವಿಸಿಲ್ಲ. ಸಿರಿಧಾನ್ಯಗಳಾದ ನವಣೆ ಇತ್ಯಾದಿಗಳನ್ನು ಸೇವಿಸುತ್ತಿರುವುದಾಗಿ ತಿಳಿಸಿದರು.