ಹೊಸದಿಲ್ಲಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಬುಧವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನ. 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆ ಯನ್ನು ಮಂಡಿಸಲಾಗುತ್ತದೆ. ಶುಕ್ರವಾರ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ್ದರು.
ನ. 27ರಂದು ಸಭೆ
ಕೃಷಿ ಕಾಯ್ದೆ ಹಿಂದೆಗೆದುಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಮಾಡಿದ್ದರೂ ಸಂಸತ್ತಿನಲ್ಲಿ ಈ ಬಗ್ಗೆ ಮಸೂದೆ ಮಂಡಿಸಿ, ಅಂಗೀಕಾರವಾಗುವ ವರೆಗೆ ಪ್ರತಿಭಟನೆ ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ಈ ಬಗ್ಗೆ ತೀರ್ಮಾನಿಸುವುದಕ್ಕಾಗಿ ನ. 27ರಂದು ಸಭೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ. ಈ ಬಗ್ಗೆ ರವಿವಾರ ಸಿಂಘು ಗಡಿಯಲ್ಲಿ ಸಮಾಲೋಚನೆ ನಡೆಸಲಾಗಿದೆ.
ಇದನ್ನೂ ಓದಿ:ಕಾರು ಹರಿಸಿ ಕೊಲೆ ಯತ್ನ ಆರೋಪ : ಟಿಎಂಸಿ ಯುವ ನಾಯಕಿ ಸಯೋನಿ ಬಂಧನ
ನ. 29ರಂದು ಹೊಸದಿಲ್ಲಿಯಲ್ಲಿ ಸಂಸತ್ ಭವನ ದತ್ತ ಪಾದಯಾತ್ರೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ. ಅದಕ್ಕೆ ಪೂರಕವಾಗಿ ನ. 22ರಂದು ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್ ನಡೆಸಿ ರೈತರು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.