Advertisement
ಅವರು ಶನಿವಾರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಯಾದ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಉಳ್ಳಾಲ ಐಸಿಎಆರ್, ಬ್ರಹ್ಮಾವರ ಕೆವಿಕೆ,ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ಕೊಚ್ಚಿ ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ, ಮಂಗಳೂರು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಮತ್ತಿತರರ ಸಂಘ – ಸಂಸ್ಥೆಗಳ ಸಹಯೋಗ
ದೊಂದಿಗೆ ಎರಡು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ರೈತರಿಗೆ ನಿರೀಕ್ಷಿತ ಆದಾಯದ ಕೊರತೆ ಎದ್ದು ಕಾಣುತ್ತಿದೆ. ಕೃಷಿ ಲಾಭದಾಯಕವಾಗಲು ಕೃಷಿ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆ ಮತ್ತು ಹೊಸ ಹೊಸ ತಂತ್ರಜ್ಞಾನ ನೀಡುವ ಅಗತ್ಯವಿದೆ ಎಂದರು.
ರಾಜ್ಯದಲ್ಲಿ ರೈತರು ಬೆಳೆದ ಉತ್ನನ್ನಗಳನ್ನು ನೇರವಾಗಿ ಎಪಿಎಂಸಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಅ ಧಿಕ ಲಾಭ ಪಡೆಯುತ್ತಿದ್ದಾರೆ. ಇದೇ ಮಾದರಿಯನ್ನು ಇತರ ರಾಜ್ಯಗಳಲ್ಲಿಯೂ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾ
ಗುತ್ತಿದೆ ಎಂದು ಪ್ರಮೋದ್ ಹೇಳಿದರು. ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತರಿ ಯೋಜನೆಯಿಂದ ಕೃಷಿಕರಿಗೆ ಲಾಭವಾಗಿದೆ. ಅನೇಕ ಕೃಷಿ ಉಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತಾಗಬೇಕು ಎಂದರು. ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿ.ವಿ. ಕುಲಪತಿ ಡಾ| ಪಿ. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಕೆ.ಎಂ. ಉಡುಪ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಿದರು.
Related Articles
Advertisement
ಸಹ ಸಂಶೋಧನಾ ನಿರ್ದೇಶಕ ಡಾ| ಎಸ್.ಯು. ಪಾಟೀಲ್ ಸ್ವಾಗತಿಸಿ, ಡಾ| ಧನಂಜಯ ವಂದಿಸಿದರು. ವೈಕುಂಠ ಹೇಳೆì ಮತ್ತು ಸಂಜೀವ ಕ್ಯಾತಪ್ಪನವರ್ ಕಾರ್ಯಕ್ರಮ ನಿರ್ವಹಿಸಿದರು.
ಕಾಡು ಪ್ರಾಣಿಗಳ ಸಮಸ್ಯೆತಂತ್ರಜ್ಞಾನದ ನೆರವಿನಿಂದ ಜಿಲ್ಲೆಯ ರೈತರು ಬಹಳಷ್ಟು ಮುಂದುವರಿದಿದ್ದರೂ ಕಾಡು ಪ್ರಾಣಿಗಳ ಹಾವಳಿಯಿಂದ ಬೇಸತ್ತಿದ್ದು, ಸಮಸ್ಯೆ
ಪರಿಹಾರಕ್ಕೆ ಅರಣ್ಯ ಸಚಿವರ, ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ರೈತರ ಸಭೆ ಕರೆದು ಪರಿಹಾರಕ್ಕೆ ಯತ್ನಿಸಲಾಗುವುದು.
ಸಚಿವ ಪ್ರಮೋದ್ ಮಧ್ವರಾಜ್