ಕಲಬುರಗಿ: ಕೃಷಿ ವಲಯ ರಾಜ್ಯದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ಎಂಎಸ್ ಕೆ ಮಿಲ್ ಪ್ರದೇಶದಲ್ಲಿ ಕುಡಾದ ಜಾಗದಲ್ಲಿ 26 ಕೋ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ತರಕಾರಿ ಮಾರುಕಟ್ಟೆ ಸಂಕಿರಣಕ್ಕೆ ಅವರು ಅಡಿಗಲ್ಲು ನೆರವೇರಿಸಿದರು.
ಇದನ್ನೂ ಓದಿ:ಸಂಪುಟ ವಿಸ್ತರಣೆ ಕುರಿತು ಸದ್ಯ ಯಾವುದೇ ಚರ್ಚೆ ಇಲ್ಲ: ಸಿಎಂ ಯಡಿಯೂರಪ್ಪ
ಕೇಂದ್ರ ಸರ್ಕಾರ ಸಹ ಕೃಷಿಗೆ ಪ್ರಮುಖ ಆದ್ಯತೆ ನೀಡಿದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ವಿಶೇಷ ಕಿಸಾನ್ ರೈಲ್ ಆರಂಭಿಸಲಾಗಿದೆ. ಪ್ರಮುಖವಾಗಿ ಶೋಭಾ ಕರಂದ್ಲಾಜೆ ಅವರು ಕೇಂದ್ರದ ಕೃಷಿ ಸಚಿವರಾಗಿದ್ದು, ರೈತಪರ ಧ್ವನಿಯಾಗಲಿದ್ದಾರೆ. ರಾಜ್ಯದಾದ್ಯಂತ ಪ್ರವಾಸಗೈದು ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಸಿಎಂ ಹೇಳಿದರು.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಸಂಸದ ಡಾ. ಉಮೇಶ ಜಾಧವ್ ಮಾತನಾಡಿದರು. ಲೋಕೋಪಯೋಗಿ ಸಚಿವರಾಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಮುಂತಾದವರಿದ್ದರು.