Advertisement
ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ರೈತರ ಕೃಷಿ ಮಾಡಲು ಬೇಕಿರುವ ವಿದ್ಯುತ್ ವ್ಯವಸ್ಥೆ ಬೆಳಿಗ್ಗೆ ಸಮಯದಲ್ಲಿ ಕಲ್ಪಿಸಬೇಕು ಎಂದರು.
Related Articles
Advertisement
ಮೈಷುಗರ್ ಕಾರ್ಯಾರಂಭಕ್ಕೆ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು. ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆದಲಾಗುವುದು. ಇದಕ್ಕೆ ಬೇಕಿರುವ ಪೂರಕ ಮಾಹಿತಿಯನ್ನು ಸಿದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ಪಿ. ಎಂ.ನರೇಂದ್ರಸ್ವಾಮಿ ಮಾತನಾಡಿ, ಮುಂಗಾರು ಆರಂಭವಾಗಲಿದೆ. ಕೃಷಿ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವ ಹಿಸಬೇಕು. ಮಣ್ಣಿನ ಸವಕಳಿಯಾಗದಂತೆ ಫಲವತ್ತತೆ ಕಾಪಾಡುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ನೀರಿನ ಮಿತವ್ಯಯ ಬಳಕೆ ಮೈಕ್ರೋ ಇರಿಗೇಷನ್, ಅಂತರ್ಜಲ ಮರುಪೂರಣದ ಬಗ್ಗೆ ಚಿಂತಿಸಿ ಅನುಷ್ಠಾನಗೊಳಿಸಬೇಕು ಎಂದರು.
ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಿ: ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಮುಂಗಾರು ಮಳೆ ಆರಂಭವಾಗಲಿದೆ. ರೈತರಿಗೆ ಅಗತ್ಯವಾಗಿರುವ ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಎಲ್ಲವನ್ನೂ ಶೇಖರಣೆ ಮಾಡಿಟ್ಟುಕೊಳ್ಳಬೇಕು. ನಗರದ ಜಿಲ್ಲಾಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆಯ ಅಗತ್ಯತೆ ಇದೆ. ಯುಜಿಡಿ ಸಮಸ್ಯೆ ಹಾಗೂ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳ್ಳರ ಸಮಸ್ಯೆ ಇದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಾಸಕರಾದ ರವಿಕುಮಾರ್ ಗೌಡ ಗಣಿಗ, ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಡೀಸಿ ಡಾ.ಎಚ್. ಎನ್.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ ಹಾಜರಿದ್ದರು.
ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಹೊಸ ಯೋಜನೆಗಳನ್ನು ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ, ಬಜೆಟ್ ಮೂಲಕ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು. – ಪಿ.ಎಂ.ನರೇಂದ್ರಸ್ವಾಮಿ, ಶಾಸಕ