Advertisement

Agriculture: ಸಾವಯವ ಕೃಷಿಗೆ ಗಮನ ಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

01:34 AM Oct 27, 2024 | Team Udayavani |

ಬ್ರಹ್ಮಾವರ: ಕೃಷಿಯಲ್ಲಿ ರಾಸಾಯನಿಕ ಅತಿಯಾಗಿ ಬಳಸುವು ದರಿಂದ ಮಣ್ಣಿನ ಫಲವತ್ತತೆ ಮತ್ತು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರೈತರು ಇದನ್ನು ಗಂಭೀರ ವಾಗಿ ಪರಿಗಣಿಸಿ, ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಕರೆ ನೀಡಿದರು.

Advertisement

ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರದ ಆವರಣದಲ್ಲಿ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಆರಂಭ ಗೊಂಡ ಎರಡು ದಿನಗಳ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದರು. ಕೃಷಿ ಕ್ಷೇತ್ರ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಮುಂದೊಂದು ದಿನ ತುತ್ತು ಅನ್ನಕ್ಕೂ ಸಮಸ್ಯೆ ಆದೀತು. ಆದ್ದರಿಂದ ಕೃಷಿಗೆ ಪ್ರಾಧಾನ್ಯತೆ ನೀಡಿ ರೈತರನ್ನು ಉತ್ತೇಜಿಸಬೇಕಿದೆ ಎಂದರು. ಕೃಷಿಕರು ಮತ್ತು ಕೃಷಿ ಕ್ಷೇತ್ರ ಪ್ರಾಕೃತಿಕ, ಮಾರುಕಟ್ಟೆ ಮತ್ತು ಕಾರ್ಮಿಕರ ಸಮಸ್ಯೆ ಮುಂತಾದ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ರೈತರನ್ನು ಆಧರಿಸುವ ಕೆಲಸ ಮಾಡುತ್ತಿದೆ ಎಂದು  ಹೇಳಿದರು.

ಕೋಟದ ಜನತಾ ಫಿಶ್‌ ಮೀಲ್‌ ಮತ್ತು ಆಯಿಲ್‌ ಪ್ರೊಡಕ್ಟ್ಸ್‌ನ ಎಂಡಿ ಆನಂದ ಸಿ. ಕುಂದರ್‌ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಿ. ಇಂದಿನ ಪಠ್ಯ ಪುಸ್ತಕಗಳಲ್ಲಿ ಕೃಷಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಪಾಠ ಇರಬೇಕು. ಆಗ ಮಕ್ಕಳಿಗೆ ಅರಿವು ಮೂಡೀತು. ಜನಪ್ರತಿನಿಧಿಗಳ ಈ ನಿಟ್ಟಿನಲ್ಲಿ ಗಮನರಿಸಬೇಕು ಎಂದು ಹೇಳಿದರು.
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ. ಕುಲಪತಿ ಡಾ| ಆರ್‌.ಸಿ. ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕರನ್ನು ಸಮ್ಮಾನಿಸಲಾಯಿತು. ಡಾ| ಧನಂಜಯ ಸ್ವಾಗತಿಸಿ, ಸಂತೋಷ್‌ ಶೆಟ್ಟಿ ನೀಲಾವರ ನಿರೂಪಿಸಿದರು. ಡಾ| ಶಂಕರ್‌ ಎಂ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next