Advertisement

ಕೃಷಿ ವಿವಿಯಲ್ಲಿ ಅಗ್ರಿವಾರ್‌ ರೂಮ್‌

01:33 PM Apr 22, 2020 | Suhan S |

ಧಾರವಾಡ: ಕೋವಿಡ್ 19 ಹಿನ್ನೆಲೆಯಲ್ಲಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆ ಹಾಗೂ ಸವಾಲುಗಳಿಗೆ ಸ್ಪಂದಿಸುವ ಉದ್ದೇಶದಿಂದ ಏ.14ರಿಂದ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿವಾರ್‌ ರೂಮ್‌ ಆರಂಭಿಸಲಾಗಿದೆ.

Advertisement

ಇದರ ಟೋಲ್‌ ಫ್ರೀ ಸಂಖ್ಯೆ 1800-425-1150 ಆಗಿದ್ದು, ರಾಜ್ಯದ ಯಾವುದೇ ಭಾಗದ ರೈತ ಬಾಂಧವರು ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಈ ಕೇಂದ್ರ ಬೆಳಿಗ್ಗೆ 8:00 ರಿಂದ ರಾತ್ರಿ 8:00 ಗಂಟೆವರೆಗೆ ಕಾರ್ಯ ನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಸರದಿಯಂತೆ ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆಗೆ ಸ್ಪಂದಿಸಲು ಲಭ್ಯವಿರುತ್ತಾರೆ.

ಕೋವಿಡ್ 19 ವೈರಸ್‌ ಬಗ್ಗೆ ಜಾಗೃತಿ ಮೂಡಿಸುವುದು, ಕೃಷಿ ಸಮಸ್ಯೆಗಳ ಬಗ್ಗೆ ಪರಿಹಾರ ನೀಡುವುದು,ರೈತರ ಬೆಳೆದ ಹಣ್ಣು, ತರಕಾರಿ ಹಾಗೂ ಇತರೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾಹಿತಿ ಕೊಡುವುದು ಈ ಕೇಂದ್ರದ ಉದ್ದೇಶವಾಗಿದೆ.

ಕೃಷಿ ವಿವಿ ಕುಲಪತಿ ಡಾ|ಮಹಾದೇವ ಚೆಟ್ಟಿ, ಮಾನ್ಯ ಆಡಳಿತ ಮಂಡಳಿ ಸದಸ್ಯರಾದ ಶಶಿಮೌಳಿ ಕುಲಕರ್ಣಿ ಹಾಗೂ ಸುರೇಶ ಗೊಣಸಗಿ ಅವರು ಈ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ವಿಸ್ತರಣಾ ನಿರ್ದೇಶಕ ಡಾ|ರಮೇಶ ಬಾಬು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next