Advertisement

ಮಾ.1ರಿಂದ ಆಗುಂಬೆ ಘಾಟಿಯಲ್ಲಿ ಸಂಚಾರ ಬಂದ್‌

01:21 AM Feb 24, 2019 | Team Udayavani |

ಶಿವಮೊಗ್ಗ: ಪದೇಪದೆ ಗುಡ್ಡ ಕುಸಿದು ಸಂಚಾರಕ್ಕೆ ತೊಡಕಾಗುತ್ತಿದ್ದ ಆಗುಂಬೆ ಘಾಟಿಯಲ್ಲಿ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾ.1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿ ಸಿ ಜಿಲ್ಲಾ ಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ. ಕಳೆದ ಬಾರಿ ಮಳೆಗಾಲದಲ್ಲಿ ಆಗುಂಬೆ ಘಾಟಿಯ ಕೆಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು. ದಿನಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತ ಘಟನೆಗಳೂ ನಡೆದಿದ್ದವು.

Advertisement

ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಂಡು ಮತ್ತೆ ಸಂಚಾರ ಆರಂಭಿಸಲಾಗುತ್ತಿತ್ತು. ಕಳೆದ ಜು.10 ಮತ್ತು 13ರಂದು ಸುರಿದ ಭಾರೀ ಮಳೆಯಿಂದಾಗಿ ಆಗುಂಬೆ ಘಾಟಿಯ 7ನೇ ಮತ್ತು 14ನೇತಿರುವಿನಲ್ಲಿ ಮತ್ತು ಆನೆಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿದ್ದು, ಶಾಶ್ವತ ದುರಸ್ತಿ ಕಾಮಗಾರಿಯನ್ನು ಇದೀಗ ಕೈಗೊಳ್ಳಲಾಗುತ್ತಿದೆ. ಈ ಅವ ಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್‌, ಎಲ್‌.ಸಿ.ವಿ.(ಮಿನಿ ವ್ಯಾನ್‌), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ- ಕೊಪ್ಪ- ಶೃಂಗೇರಿ-ಮಾಳಾಘಾಟ್‌- ಕಾರ್ಕಳ- ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರೀ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಸುರಿ ಬಸ್‌ಗಳು, ಬುಲೆಟ್‌ ಟ್ಯಾಂಕರ್ಸ್‌, ಶಿಪ್‌ ಕಾರ್ಗೋ ಕಂಟೈನರ್ಸ್‌ ಮತ್ತು ಲಾಂಗ್‌ ಚಾಸೀ ವಾಹನಗಳು ತೀರ್ಥಹಳ್ಳಿ- ಮಾಸ್ತಿಕಟ್ಟೆ- ಹೊಸಂಗಡಿ- ಸಿದ್ದಾಪುರ- ಕುಂದಾಪುರ- ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next