Advertisement

ಆಗುಂಬೆ ಘಾಟಿ : ರಸ್ತೆ ಬಿರುಕು, ಮತ್ತೆ ಕುಸಿಯುವ ಭೀತಿ

12:46 AM Jul 17, 2022 | Team Udayavani |

ಹೆಬ್ರಿ: ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ ಭೂಕುಸಿತವಾಗಿ ಈಗಾಗಲೇ ಬಸ್‌ ಸಂಚಾರ ಸ್ಥಗಿತಗೊಂಡು ಒಂದು ವಾರ ಕಳೆದಿದೆ. ಇದೇ ವೇಳೆ ಸುರಿಯುತ್ತಿರುವ ಭಾರೀ ಮಳೆಯಿಂದ 3ನೇ ಸುತ್ತಿನ ರಸ್ತೆಯಲ್ಲಿ ಬಿರುಕು ಕಂಡಿದ್ದು ಮತ್ತೆ ಕುಸಿಯುವ ಭೀತಿ ಎದುರಾಗಿದೆ.

Advertisement

ಶನಿವಾರ ಆಗುಂಬೆ ಘಾಟಿಯಲ್ಲಿ 17 ಸೆ.ಮೀ. ಮಳೆಯಾಗಿದ್ದು ಭಾರೀ ಮಳೆಯ ಕಾರಣ ಘಾಟಿಯ ಪ್ರತಿ ಸುತ್ತಿನಲ್ಲೂ ತಡೆಗೋಡೆಯ ಬದಿ ನೀರು ರಬಸವಾಗಿ ಹರಿಯುತ್ತಿರುವುದರಿಂದ ಬಿರುಕು ಕಾಣುತ್ತಿದೆ ಎನ್ನಲಾಗುತ್ತಿದೆ. ಇದೇ ರೀತಿ ಮಳೆ ಮುಂದುವರಿದರೆ ಬಿರುಕು ಬಿಟ್ಟ ಸ್ಥಳದಲ್ಲಿ ನೀರು ಹರಿದು ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಕಳೆದ ಒಂದು ವಾರದಿಂದ ಬಸ್‌ ಸಂಚಾರ ಸ್ಥಗಿತಗೊಂಡಿದ್ದು ಶಿವಮೊಗ್ಗ, ಚಿಕ್ಕಮಗಳೂರಿನಿಂದ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರಿಗೆ ಸಮಸ್ಯೆಯಾಗಿದೆ. ಸದ್ಯ ಕಾರು ಹಾಗೂ ದ್ವಿಚಕ್ರವಾಹನಗಳ ಸಂಚಾರಕ್ಕೆ ಅವಕಾಶವಿದ್ದು ಇದೇ ರೀತಿ ಮಳೆ ಮುಂದುವರಿದರೆ ಲಘವಾಹನ ಸಂಚಾರ ಕೂಡ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ವಿರಾಜಪೇಟೆ -ಬೈಂದೂರು ರಾಜ್ಯ ಹೆದ್ದಾರಿಯ ನೇರಳೆಕೂಡಿಗೆ ಬಳಿ ರಸ್ತೆ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಆ.10ರ ವರೆಗೆ ನಿಷೇಧಿಸಲಾಗಿದೆ. ಇದರ ಬದಲು ಶೃಂಗೇರಿಯಿಂದ ಕಿಗ್ಗಾ ಮೂಲಕ ಬೇಗಾರು ಮಾರ್ಗದಲ್ಲಿ ಸಂಚರಿಸಬಹುದು ಎಂದು ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ಆದೇಶದಲ್ಲಿ ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next