Advertisement

ಆಗುಂಬೆಯಲ್ಲಿ ಬೃಹತ್ ಗಾತ್ರದ ಮರ ಬಿದ್ದು : ವಾಹನ ಸಂಚಾರ ಅಸ್ತವ್ಯಸ್ತ

01:16 PM Sep 11, 2021 | Team Udayavani |

ಹೆಬ್ರಿ : ಭಾರಿ ಮಳೆಗೆ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Advertisement

ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಆಗುಂಬೆ ಎರಡನೇ ತಿರುವಿನಲ್ಲಿ ಭಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ ಪರಿಣಾಮ ಎರಡು ಬದಿಯಲ್ಲೂ ವಾಹನಗಳು ಸರತಿ ಸಾಲಿನಲ್ಲಿ ನಿಂತಿವೆ.

ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಸೇರಿ ಮರವನ್ನು ತುಂಡರಿಸಿ ರಸ್ತೆ ಸಂಚಾರ ಸುಗಮಗೊಳಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಇದನ್ನೂ ಓದಿ :ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್ 7 ಎಫ್‌ಇ ವೈ-ಫೈ ಎಸ್ ಪೆನ್‌ನೊಂದಿಗೆ ಬಿಡುಗಡೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next