Advertisement

ಆ. 3: ಮಹಿಳಾ ವಿಭಾಗದಿಂದ ಆಟಿಡೊಂಜಿ ಕೂಟ

10:55 AM Aug 02, 2019 | Suhan S |

ಮುಂಬಯಿ, ಆ. 1: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಹಿಳಾ ವಿಭಾಗದ ವತಿಯಿಂದ ಆ. 3ರಂದು ಸಂಜೆ 5ರಿಂದ ವಾರ್ಷಿಕ ಆಟಿಡೊಂಜಿ ಕೂಟ ಕಾರ್ಯಕ್ರಮವು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

Advertisement

ಕಾರ್ಯಕ್ರಮವನ್ನು ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಇವರು ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸಂಘ ಪನ್ವೆಲ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಗೋಕುಲ್ ಸಯಾನ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರೇಮಾ ರಾವ್‌, ಸಮಾಜ ಸೇವಕಿ ವಿಜಯಲಕ್ಷ್ಮೀ ಕೇಶವ ಅಂಚನ್‌ ಅವರು ಆಗಮಿಸಲಿದ್ದಾರೆ.

ಕೇಂದ್ರ ಕಚೇರಿಯ ಮತ್ತು ಸ್ಥಳೀಯ ಕಚೇರಿಗಳ ಮಹಿಳಾ ವಿಭಾಗದವರಿಂದ ತುಳುನಾಡಿನ ವಿವಿಧ ಖಾದ್ಯ-ಪದಾರ್ಥಗಳ ಪ್ರದರ್ಶ, ಆಟಿ ಕಳಂಜ ನೃತ್ಯ, ಜಾನಪದ ಹಾಡು, ನೃತ್ಯ, ರಸಪ್ರಶ್ನೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಎಸ್‌. ಕೋಟ್ಯಾನ್‌, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಗೌರವ ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ ಮತ್ತು ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next