Advertisement

ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹಗರಣ: ಶಶಿಕಾಂತ್‌ ವಿರುದ್ಧ ಚಾರ್ಜ್‌ಶೀಟ್‌

10:12 PM Mar 16, 2022 | Team Udayavani |

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹಗರಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶಶಿಕಾಂತ್‌ ಶರ್ಮಾ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ.

Advertisement

ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಆರೋಪಪಟ್ಟಿಯಲ್ಲಿ ಭಾರತೀಯ ವಾಯುಪಡೆಯ ನಾಲ್ವರು ಸಿಬ್ಬಂದಿ ಹಾಗೂ ಅಧಿಕಾರಿಗಳ ಹೆಸರನ್ನು ಉಲ್ಲೇಖೀಸಲಾಗಿದೆ.

2011ರಿಂದ 2013ರವರೆಗೆ ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶರ್ಮಾರ ವಿರುದ್ಧ ತನಿಖೆ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ನಂತರ ಈ ಆರೋಪಪಟ್ಟಿ ಸಲ್ಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next