Advertisement

ಸಂಸತ್‌ನಲ್ಲಿ ಕುಸಿದು ಬಿದ್ದ ಅಹಮದ್‌ ನಿಧನ

03:45 AM Feb 02, 2017 | |

ಹೊಸದಿಲ್ಲಿ: ಸಂಸತ್‌ನಲ್ಲಿ ಮಂಗಳವಾರ ರಾಷ್ಟ್ರಪತಿ ಭಾಷಣದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದ ಮಾಜಿ ಕೇಂದ್ರ ಸಚಿವ, ಇಂಡಿಯನ್‌ ಯೂನಿಯನ ಮುಸ್ಲಿಂ ಲೀಗ್‌ನ ಹಿರಿಯ ನಾಯಕ ಇ. ಅಹಮದ್‌ (78) ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

Advertisement

ರಾಷ್ಟ್ರಪತಿ ಭಾಷಣ ಮಾಡುವ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಅಹಮದ್‌ ಅವರನ್ನು ತತ್‌ಕ್ಷಣ ಇಲ್ಲಿನ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೇ ಬುಧವಾರ ಮುಂಜಾನೆ 2.15ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯಸಭಾ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಸಹಿತ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಮಲಪ್ಪುರಂ ಕ್ಷೇತ್ರದ ಸಂಸದರೂ ಆಗಿರುವ ಅಹಮದ್‌ ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರಕಾರದ ವೇಳೆ ವಿದೇಶಾಂಗ ವ್ಯವಹಾರ ಇಲಾಖೆಯ ರಾಜ್ಯ ಸಚಿವರಾಗಿದ್ದರು. ಗುರುವಾರ ಕಣ್ಣೂರಿನಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಕುಟುಂಬ ಸದಸ್ಯರ ಅಸಮಾಧಾನ: ಅಹಮದ್‌ ಅವರನ್ನು ಭೇಟಿ ಮಾಡಲು ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆ ಸಿಬಂದಿ ಅವಕಾಶ ಮಾಡಿಕೊಡಲಿಲ್ಲ ಎಂದು ಅಹಮದ್‌ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next