ಬೆಂಗಳೂರು: ನನ್ನ ರಾಜಕೀಯ ಬೆಳವಣಿಗೆಯಲ್ಲಿ ಅಹಮದ್ ಪಟೇಲ್ ಅವರ ಪಾತ್ರವಿದೆ. ನಾನು ಕಾಂಗ್ರೆಸ್ ಸೇರಲು ಅವರೇ ಕಾರಣ. ನಾನು ಮುಖ್ಯಮಂತ್ರಿಯಾಗಲೂ ಆಗಲು ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ನನಗೆ ವೈಯಕ್ತಿಕವಾಗಿಯೂ ನಷ್ಟವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ನಿಧನರಾದ ಅಹಮದ್ ಪಟೇಲ್ ಅವರನ್ನು ಸ್ಮರಿಸಿಕೊಂಡರು. ಅವರು ಬಹಳ ದೀರ್ಘ ಕಾಲದಿಂದ ಕಾಂಗ್ರೆಸ್ ವಿವಿಧ ಹುದ್ದೆಯಲ್ಲಿ ಕೆಲಸ ಮಾಡಿದವರು. ಅತ್ಯಂತ ನಿಷ್ಠಾವಂತ ವ್ಯಕ್ತಿ. ಧೀರ್ಘ ಕಾಲ ಸೋನಿಯಾ ಗಾಂಧಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದರು, ಕಾಂಗ್ರೆಸ್ ಆಧಾರ ಸ್ಥಂಬಗಳಲ್ಲಿ ಒಬ್ಬರಾಗಿದ್ದರು ಎಂದರು.
ಇದನ್ನೂ ಓದಿ:ಗೋವಾದಲ್ಲಿ ಸೋನಿಯಾ ಗಾಂಧಿ ಸೈಕ್ಲಿಂಗ್: ವಿಡಿಯೋ ವೈರಲ್
2004 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೇಳೆ ನನಗೆ ಪರಿಚಯವಾದರು. ಅಂದಿನಿಂದ ಆತ್ಮೀಯ ಸ್ನೇಹಿತರಾಗಿದ್ದರು. ಅವರ ಪಕ್ಷ ನಿಷ್ಠೆ ಇಂದಿನ ಮುಖಂಡರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ದಿವಾಳಿ: ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಬಜೆಟ್ ಸಂದರ್ಭದಲ್ಲಿ ಅನಗತ್ಯ ವೆಚ್ಚ ಕಡಿಮೆ ಮಾಡಲು ಸಲಹೆ ನೀಡಿದ್ದೆ. ವಿಧವಾ ವೇತನ ವೃದ್ದಾಪ್ಯ ವೇತನ ನೀಡಲು ಹಣವಿಲ್ಲ. ಈ ನಿಗಮ ಮಂಡಳಿ ಯಾಕೆ ಮಾಡಿದ್ದಾರೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.