ಅಹಮದಾಬಾದ್ : ನಗರದ ಪರಿಮಳ್ ಗಾರ್ಡನ್ ಬಳಿಯ ದೇವ್ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.
Advertisement
ಸಂಕೀರ್ಣದೊಳಗೆ 4ನೇ ಮಹಡಿಯಲ್ಲಿದ್ದ ಆಸ್ಪತ್ರೆಯಿಂದ 10 ಮಕ್ಕಳು ಸೇರಿದಂತೆ 50 ಕ್ಕೂ ಹೆಚ್ಚು ಜನರನ್ನು ತುರ್ತು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.
ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿಗಳು ಸಮರೋಪಾದಿಯಲ್ಲಿ ಬೆಂಕಿ ನಂದಿಸಿ, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.