Advertisement

ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಅಹೋರಾತ್ರಿ ಧರಣಿ ಆರಂಭ

11:42 AM Sep 07, 2017 | Team Udayavani |

ಬೆಂಗಳೂರು: ಶೈಕ್ಷಣಿಕ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. 

Advertisement

ಶಿಕ್ಷಕರು, ಉಪನ್ಯಾಸಕರು, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿಧಾನ ಪರಿಷತ್‌ ಉಪ ಸಭಾಪತಿ ಮರಿತಿಬ್ಬೇಗೌಡ, ಬಸವರಾಜ ಹೊರಟ್ಟಿ, ಪುಟ್ಟಣ್ಣ, ರಮೇಶ್‌ಬಾಬು, ಶ್ರೀಕಂಠೆಗೌಡ, ಶರವಣ, ಬಿಜೆಪಿಯ ಅರುಣ್‌ ಶಹಾಪುರ, ಹನುಮಂತಪ್ಪ ನಿರಾಣಿ, ಗಣೇಶ್‌ ಕಾರ್ಣಿಕ್‌, ಕಾಂಗ್ರೆಸ್‌ನ ಅಮರನಾಥ ಪಾಟೀಲ್‌, ಸಂಕನೂರು ಹಾಗೂ ಶರಣಪ್ಪ ಮಟ್ಟೂರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌, ಧರಣಿ ನಿರತ ರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದರು. 15 ದಿನಗಳಲ್ಲಿ ಸಭೆ ಕರೆದು ಆಥಿಕ ಮತ್ತು ಕಾನೂನು ವಿಚಾರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆದರೆ, ಇದಕ್ಕೆ ಒಪ್ಪದ ಧರಣಿ ನಿರತರು ಮುಖ್ಯಮಂತ್ರಿ ಸಭೆ ಕರೆಯುವವರೆಗೂ ಧರಣಿ ಮುಂದುವರಿಯಲಿದೆ ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next