Advertisement
ಎಐಸಿಸಿ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಪಡಿಸುವುದೇ ಪ್ರಮುಖ ಕಾರ್ಯಸೂಚಿ.ಸದ್ಯ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಲಂಡನ್‌ನಲ್ಲಿದ್ದು, ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗುವರು. ಅಲ್ಪಸಂಖ್ಯಾಕ ಸಮುದಾಯದ ಪ್ರಮುಖ ನಾಯಕ ಮತ್ತು ಗಾಂಧಿ ಕುಟುಂಬದ ಪರಮಾಪ್ತರಾಗಿದ್ದ ಆಜಾದ್ ಅವರ ನಿರ್ಗಮನ ಪಕ್ಷಕ್ಕೆ ಆಘಾತ ನೀಡಿದೆ ಎಂದೇ ವಿಶ್ಲೇಷಿಸಲಾಗಿದೆ.