Advertisement
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ದೇಶ ಹಾಗೂ ರಾಜ್ಯವು ಈಗ ಕೊರೊನಾ ವೈರಸ್ ಸಂಕಷ್ಟಕ್ಕೆ ಸಿಲುಕಿ ಸಮಸ್ಯೆ ಅನುಭವಿಸುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೂಲಿಕಾರರಿಗೆ, ಬೇರೆ-ಬೇರೆ ರೀತಿಯ ಕೆಲಸ ಮಾಡುವಂತಹ ಕಾರ್ಮಿಕರಿಗೆ, ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ, ಸಣ್ಣ ವ್ಯಾಪಾರಸ್ಥರಿಗೆ, ದಿನಗೂಲಿ ಕೆಲಸಗಾರರಿಗೆ, ಸಮಾಜದಲ್ಲಿ ದಿನನಿತ್ಯ ದುಡಿದು ತಿನ್ನುವವರಿಗೆ ಹಾಗೂ ಇತರೆ ಅನೇಕ ರೀತಿಯ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿರುವ ಎಲ್ಲ ವರ್ಗದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದ್ದಿರಿ. ಆದರೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ಏಕೆ ವಿಶೇಷ ನೆರವು ನೀಡಿಲ್ಲ. ಅವರು ಮನುಷ್ಯರಲ್ಲವೇ? ಲಾಕ್‌ಡೌನ್‌ದಿಂದಾಗಿ ರಾಜ್ಯದಲ್ಲಿನ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರು ವೇತನವಿಲ್ಲದೆ ಅಭದ್ರತೆಯಿಂದ ನರಳುತ್ತಿದ್ದಾರೆ. ಹೀಗಾಗಿ ಅವರೆಲ್ಲ ಸಂಬಳವಿಲ್ಲದೆ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.
Advertisement
ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೂ ಆರ್ಥಿಕ ನೆರವು ನೀಡಿ: ಹೊರಟ್ಟಿ
07:43 AM May 15, 2020 | Suhan S |
Advertisement
Udayavani is now on Telegram. Click here to join our channel and stay updated with the latest news.