Advertisement
ಎಚ್‌ಐವಿ ಸೋಂಕು ಹರಡುವ ವಿಧಾ ನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆಯಾದರೂ ಸ್ವಯಂ ಸುರಕ್ಷತೆ ಕಾಳಜಿ ವಹಿಸುವಂತೆ ನಿರಂತರ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಎಚ್‌ಐವಿ ಪೀಡಿತರನ್ನು ಕೀಳಾಗಿ ಕಾಣಬೇಡಿ ಎಂಬ ಜಾಗೃತಿ ಅವಶ್ಯಕತೆ ಇದೆ ಎಂಬುವುದು ತಜ್ಞರ ಅಭಿಪ್ರಾಯವಿದೆ.
Related Articles
Advertisement
ಈ ಕುರಿತು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡೆಸಿರುವ ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. ವರ್ಷದಿಂದ ವರ್ಷಕ್ಕೆ ಸೋಂಕು ಕಡಿಮೆ ಯಾಗುತ್ತಿರುವುದು ಆರೋಗ್ಯ ಇಲಾಖೆಗೆ ಸಮಧಾನ ತಂದಿದ್ದು, ಸೋಂಕಿತರ ಪ್ರಮಾಣ ಶೂನ್ಯಕ್ಕೆ ತರಲು ಇಲಾಖೆ ಶ್ರಮಿಸುತ್ತಿದೆ.
ಜಿಲ್ಲೆಯ ನಾಲ್ಕು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಚ್‌ಐವಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅಲ್ಲಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬಹುದು. ಬಹುತೇಕರಿಗೆ ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಇಲಾಖೆ ಸೋಂಕಿತರಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ವೈದ್ಯಕೀಯ ಚಿಕಿತ್ಸೆ ಜತೆಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಲಾಗುತ್ತಿದೆ.
“ಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಸೌಲಭ್ಯ ಉಚಿತವಾಗಿದೆ. ಜಿಲ್ಲೆಯಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.” – ಡಾ.ನಾಗೇಶ್, ಜಿಲ್ಲಾ ಕ್ಷಯರೋಗ ಅಧಿಕಾರಿ.
“ಏಡ್ಸ್ ಸೋಂಕಿತರನ್ನು ಕೀಳಾಗಿ ಕಾಣಬೇಡಿ, ಅವರು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಬೇಕು. ಪ್ರತಿ ವರ್ಷವೂ ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಮ್ ಯುವಕರ ವೇದಿಕೆಯಿಂದ ಏಡ್ಸ್ ದಿನಾಚರಣೆ ಮಾಡಿಕೊಂಡು ಬರಲಾಗಿದೆ.” – ಎಂ.ಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷರು.
●ಎಸ್.ಮಹೇಶ್