Advertisement

ಹಾಸ್ಟೆಲ್ ಸೌಲಭ್ಯಗಳಿಗಾಗಿ ಎಐಡಿಎಸ್‌ಒ ಪ್ರತಿಭಟನೆ

04:04 PM Jul 24, 2019 | Suhan S |

ಧಾರವಾಡ: ಸರ್ಕಾರಿ ಹಾಸ್ಟೆಲ್ಗಳಿಗೆ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ದಲಿತ ಮಹಿಳಾ ಒಕ್ಕೂಟ ವತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

Advertisement

ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಸರ್ಕಾರಿ ಹಾಸ್ಟೆಲ್ಗಳ ಸಂಖ್ಯೆ ಹೆಚ್ಚಿಸಬೇಕು. ಶಾಲಾ-ಕಾಲೇಜುಗಳ ಆರಂಭದ ದಿನದಿಂದಲೇ ಹಾಸ್ಟೆಲ್ಗಳನ್ನೂ ಆರಂಭಿಸಬೇಕು. ಸರ್ಕಾರಿ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಂತ ಕಟ್ಟಡದಂತಹ ಮೂಲಸೌಲಭ್ಯ ಒದಗಿಸಬೇಕು. ವಿದ್ಯಾರ್ಥಿ ವೇತನಗಳನ್ನು ಆಯಾ ಶೈಕ್ಷಣಿಕ ವರ್ಷದಲ್ಲೇ ನಿಯಮಿತವಾಗಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಗೌರಮ್ಮ ಕರೆಪ್ಪನವರ ಹಾಗೂ ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಮಹಾಂತೇಶ ಬಿಳೂರ ಮಾತನಾಡಿ, ಜಿಲ್ಲೆಯ ಹಾಸ್ಟೆಲ್ಗಳು ಸಮಸ್ಯೆಯ ಕೂಪವಾಗಿವೆ. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ನಿಭಾಯಿಸಲು ಸಿಗುತ್ತಿದ್ದ ಅಲ್ಪ-ಸ್ವಲ್ಪ ವಿದ್ಯಾರ್ಥಿ ವೇತನವೂ ಸರಿಯಾಗಿ ಬರದ ಕಾರಣ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಆಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಈ ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ಜಿಲ್ಲಾ ಸಂಘಟನಾಕಾರರಾದ ಸಿಂಧೂ ಕೌದಿ, ರಣಜೀತ್‌ ಧೂಪದ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next