Advertisement

ವಿದ್ಯಾರ್ಥಿ ಬಸ್‌ಪಾಸ್‌ಗಾಗಿ ಎಐಡಿಎಸ್‌ಒ ಪ್ರತಿಭಟನೆ

12:44 PM Jun 02, 2019 | Team Udayavani |

ಧಾರವಾಡ: ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಿಸುವಲ್ಲಿ ಕೆಎಸ್‌ಆರ್‌ಟಿಸಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Advertisement

ಕಡಪಾ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಹಳೇ ಬಸ್‌ ನಿಲ್ದಾಣದ ವರೆಗೂ ಸಾಗಿತು. ಎಐಡಿಎಸ್‌ಒ ಜಿಲ್ಲಾ ಸಂಘಟಕ ರಣಜೀತ್‌ ಧೂಪದ ಮಾತನಾಡಿ, ಶಾಲಾ-ಕಾಲೇಜುಗಳು ರಾಜ್ಯವ್ಯಾಪಿ ಮೇ ತಿಂಗಳಿನಲ್ಲೇ ಪ್ರಾರಂಭವಾಗಿವೆ. ಸುಗಮವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಬಸ್‌ಪಾಸ್‌ ಅತ್ಯಗತ್ಯ. ಆದರೆ ತರಗತಿಗಳು ಪ್ರಾರಂಭವಾಗಿ 2 ವಾರವಾದರೂ ಇನ್ನೂ ಬಸ್‌ಪಾಸ್‌ ದೊರಕದೆ ಪ್ರತಿದಿನ ವಿದ್ಯಾರ್ಥಿಗಳು ಬಸ್‌ ಟಿಕೆಟ್‌ಗೆ ಅಧಿಕ ಹಣ ವ್ಯಹಿಸಿ ಪ್ರಯಾಣಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಳಂಬ ಮಾಡದೆ ಎಲ್ಲ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಿಸಬೇಕು. ಬಸ್‌ಪಾಸ್‌ ವಿತರಿಸುವವರೆಗೂ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ತಪ್ಪಿಸಬೇಕೆಂದು ಅವರು ಆಗ್ರಹಿಸಿದರು.

ಜಿಲ್ಲಾ ಮುಖಂಡರಾದ ಮಹಾಂತೇಶ ಬಿಳೂರ, ಶಶಿಕಲಾ ಮೇಟಿ, ಸಿಂಧೂ ಕೌದಿ, ಕಾಲೇಜು ವಿದ್ಯಾರ್ಥಿಗಳಾದ ಪವಿತ್ರಾ, ಅಭಿಷೇಕ, ರಾಣಿ, ಪ್ರಕಾಶ್‌, ಶಿವು ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next