Advertisement
ಮಧ್ಯ ಪ್ರದೇಶದ ವಿವಿಧ ಜಿಲ್ಲೆಗಳ 1500ಕ್ಕೂ ಹೆಚ್ಚು ಯುವಕರು ತಮ್ಮ ಜಿಲ್ಲೆಗಳಲ್ಲಿ ನಿರಂತರ ಹಲವಾರು ಪ್ರತಿಭಟನೆಗಳ ನಂತರ ಭೋಪಾಲ್‌ನಲ್ಲಿ ಶುಕ್ರವಾರ ಸಭೆ ಸೇರಿದ್ದರು. ಎಲ್ಲರಿಗೂ ಉದ್ಯೋಗ ನೀಡಿ, ಎಸ್‌ಎಸ್‌ಸಿ, ರೈಲ್ವೆ, ಶಿಕ್ಷಕರು ಮತ್ತು ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳೊಂದಿಗೆ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಅವರಿಗೆ ಮನವಿಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅವರ ಅಹವಾಲಗಳನ್ನು ಕೇಳುವಬದಲು, ಮಧ್ಯಪ್ರದೇಶ ಪೊಲೀಸರು ಅವರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ಅನೇಕರು ಗಾಯಗೊಂಡಿದ್ದಾರೆ. ಈ ಹೋರಾಟದ ನಾಯಕತ್ವ ವಹಿಸಿದ್ದ ಎಐಡಿವೈಓ ಮಧ್ಯಪ್ರದೇಶ ರಾಜ್ಯ ಕಾರ್ಯದರ್ಶಿ ಪ್ರಮೋದ್ ನಾಮದೇವ್ ಅವರೊಂದಿಗೆ ನೂರಾರು ಯುವಕರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಲಾಠಿಚಾರ್ಜ್‌ಗೆ ಕಾರಣರಾದವರಿಗೆ ಶಿಕ್ಷೆಯಾಗಲಿ
05:25 PM Sep 07, 2020 | Suhan S |
Advertisement
Udayavani is now on Telegram. Click here to join our channel and stay updated with the latest news.