ಈ ಹಿಂದೆ ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದ್ದ ಒವೈಸಿ, ಈಗ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ, ಜೆಡಿಎಸ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
Advertisement
ಕರ್ನಾಟಕದಲ್ಲಿ ಜೆಡಿಎಸ್ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವಂತಾಗಬೇಕು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಹೀಗಾಗಿ, ನಾವು ಜೆಡಿಎಸ್ ಬೆಂಬಲಿಸುತ್ತೇವೆ ಎಂದು ಒವೈಸಿ ಹೇಳಿದ್ದಾರೆ. ಈ ಕುರಿತು ನಾನು ಈಗಾಗಲೇ ಕುಮಾರಸ್ವಾಮಿ ಜತೆ ಚರ್ಚಿಸಿದ್ದೇನೆ. ನಾನೂ ಸೇರಿದಂತೆ ಪಕ್ಷದ ಸದಸ್ಯರು ಸಾರ್ವಜನಿಕ ಸಭೆ ನಡೆಸಿ ಜೆಡಿಎಸ್ ಪರ ಪ್ರಚಾರ ಕೈಗೊಳ್ಳುತ್ತೇವೆ ಎಂದೂ ಅವರು ತಿಳಿಸಿದ್ದಾರೆ.
– ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ