Advertisement

ಪ್ರಸಕ್ತ ಸಾಲಿನಲ್ಲೇ ಕಾನೂನು ಕಾಲೇಜು ಸ್ಥಾಪನೆ ಗುರಿ

02:48 PM Jul 17, 2023 | Team Udayavani |

ಚಾಮರಾಜನಗರ: ವಿದ್ಯಾರ್ಥಿಗಳು ವ್ಯಾಸಂಗ ಸಮ ಯ ದಲ್ಲಿ ಗುರಿ ಸಾಧನೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.

Advertisement

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾಂಸ್ಕೃ ತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಅಭಿವ್ಯಕ್ತಿ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯು 25 ವರ್ಷ ದಾಟಿ ಮುಂದೆ ಸಾಗುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಾಗಿದೆ. ಜಿಲ್ಲೆ ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಲು ಮೂಲ ಸೌಕರ್ಯಗಳು ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ತಮ್ಮ ಗುರಿ ಸಾಧನೆಗೆ ಹೆಚ್ಚಿನ ಪರಿಶ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕಾನೂನು ಕಾಲೇಜು ಸ್ಥಾಪನೆ: ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜು, ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು, ಐಟಿಐ ಡಿಪ್ಲೊಮಾ ಕಾಲೇಜು ಸ್ಥಾಪನೆಯಾಗಿದೆ. ಶೈಕ್ಷಣಿಕ ವರ್ಷದಿಂದ ಕಾನೂನು ಕಾಲೇಜು ಸ್ಥಾಪನೆಯ ಗುರಿ ಹೊಂದಲಾಗಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಗಮನಹರಿಸಿ ದೇಶದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.

ಭವಿಷ್ಯದತ್ತ ಗಮನಹರಿಸಿ: ವಿದ್ಯಾರ್ಥಿಗಳು ಕಾಲೇಜಿನ ದಿನಗಳಲ್ಲಿ ಯಾವುದೇ ಗೊಂದಲಗಳಿಗೆ ತಲೆ ಹಾಕದೇ ನಿಮ್ಮ ಭವಿಷ್ಯದತ್ತ ಗಮನಹರಿಸಬೇಕು. ಪ್ರಸ್ತುತ ದಿನವು ಸ್ಪರ್ಧಾತ್ಮಕ ಯುಗವಾದರಿಂದ ಚೆನ್ನಾಗಿ ವಿದ್ಯಾಭ್ಯಾಸ ಮಾಡಿದವರಿಗೆ ಮಾತ್ರ ಸರ್ಕಾರಿ ಕೆಲಸ ಲಭಿಸಲು ಸಾಧ್ಯ. ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗಾಗಿ ಬದನಗುಪ್ಪೆ ಕೈಗಾರಿಕಾ ವಲಯದಲ್ಲಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಶಾಸಕರು ಹೇಳಿದರು.

Advertisement

ಶಿಕ್ಷಣಕ್ಕೆ ಹೆಚ್ಚು ಒತ್ತು: ಚಾಮರಾಜನಗರ ವಿವಿಯ ಉಪಕುಲಪತಿ ಪ್ರೊ.ಎಂ.ಆರ್‌.ಗಂಗಾಧರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಜಿಲ್ಲೆಗಳಲ್ಲಿ ಚಾಮರಾಜ ನಗರವೂ ಒಂದಾಗಿದೆ. ಜಿಲ್ಲೆಯಲ್ಲಿ ಎಲ್ಲಾ ವಿಭಾಗದ ಕಾಲೇಜುಗಳು ಸ್ಥಾಪನೆಯಾಗಿದ್ದು, ವಿದ್ಯಾರ್ಥಿಗಳು ಹೆಚ್ಚು ಓದಿನ ಕಡೆ ಗಮನ ನೀಡಿದಾಗ ಮಾತ್ರ ವಿಶ್ವವಿದ್ಯಾಲಯಗಳಿಗೆ ಗೌರವ ದೊರಕಿದಂತಾಗುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದ ಗುರಿಗಳನ್ನು ಹೊಂದಬೇಕು. ದೇಶದ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು ಎಂದರು.

ಮಹಾನ್‌ ವ್ಯಕ್ತಿಗಳ ಆದರ್ಶ ಮೈಗೂಡಿಸಿಕೊಳ್ಳಿ: ಮುಖ್ಯ ಭಾಷಣ ಮಾಡಿದ ಕಾಲೇಜು ಶಿಕ್ಷಣ ಇಲಾಖೆಯ (ಮೈಸೂರು ವಿಭಾಗ) ವಿಶ್ರಾಂತ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಡಾ.ಅಂಬೇಡ್ಕರ್‌ ಅವರ ಆದರ್ಶಗಳು, ವ್ಯಕ್ತಿತ್ವಗಳನ್ನು ವಿದ್ಯಾರ್ಥಿಗಳು ಅನುಸರಿಸುವಂತಾಗಬೇಕು. ಮಹಾನ್‌ ವ್ಯಕ್ತಿಗಳ ಆದರ್ಶ ಗುಣ ಮೈಗೊಡಿಸಿಕೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸಿ ಸಂಘಟಿತರಾಗಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಎಂ.ಮಹೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್‌.ಗುರುಲಿಂಗಯ್ಯ, ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ವಸತಿ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಸ್‌. ಚಂದ್ರಮ್ಮ, ಪ್ರಾದೇಶಿಕ ಜಂಟಿ ಸಹಾಯಕ ನಿರ್ದೇಶಕ ನಾಗೇಂದ್ರಪ್ರಸಾದ್‌, ಪ್ರಾಧ್ಯಾಪಕ ಶಿವಸ್ವಾಮಿ, ಸಾಂಸ್ಕೃತಿಕ ವೇದಿಕೆ ಸಂಚಾಲಕ ನಾಗೇಂದ್ರಪ್ರಸಾದ್‌, ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next