Advertisement
ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ನಡೆದ “ನಮ್ಮ ನಡಿಗೆ ಸ್ವತ್ಛ ಗ್ರಾಮದ ಕಡೆಗೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಟ್ಟರ್ಗಾ ಗ್ರಾಮ ಸ್ವಾತಂತ್ರ್ಯ ಸೇನಾನಿಗಳ ನಾಡಾಗಿದೆ.
Related Articles
Advertisement
ಗ್ರಾಮಗಳು ಅಭಿವೃದ್ಧಿಯಾಗದ ಹೊರತು ದೇಶ ಅಭಿವೃದ್ಧಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ರಾಮಾಭಿವೃದ್ಧಿಗೆ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಇಂದು ಮಹಿಳೆಯರೆ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂಬುದನ್ನು ತಿಳಿಸುತ್ತದೆ ಎಂದರು.
ಭಾಲ್ಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ರಸ್ತೆ ಸುಧಾರಣೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಜಿಲ್ಲೆಯ ಜನರು ಪ್ರಸ್ತಾವನೆ ಸಲ್ಲಿಸಿದಲ್ಲಿ ರಸ್ತೆಗಳ ದುರಸ್ತಿ, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾ ಗುವುದು. ಕೃಷಿ ಹೊಂಡ ನಿರ್ಮಿಸಲು ಕೋರಿ ಅರ್ಜಿ ಸಲ್ಲಿಸಿ ಕೃಷಿಭಾಗ್ಯ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಸಚಿವರು ಹೇಳಿದರು.
ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ತಾಪಂ ಅಧ್ಯಕ್ಷೆ ರೇಖಾ ಪಾಟೀಲ, ಉಪಾಧ್ಯಕ್ಷ ಮಾರುತಿರಾವ್, ಅಟ್ಟರ್ಗಾ ಗ್ರಾಪಂ ಅಧ್ಯಕ್ಷೆ ಗಂಗೂಬಾಯಿ ದಿಗಂಬರ್, ಉಪಾಧ್ಯಕ್ಷೆ ಪ್ರಭಾವತಿ, ಜಿಪಂ ಸದಸ್ಯ ವಿದ್ಯಾಸಾಗರ ಶಿಂಧೆ, ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ, ಜಿಪಂ ಸಿಇಒ ಡಾ| ಸೆಲ್ವಮಣಿ ಆರ್., ಸ್ವತ್ಛ ಭಾರತ ಅಭಿಯಾನದ ನೋಡೆಲ್ ಅಧಿಕಾರಿ ಗೌತಮ ಅರಳಿ, ಪಿಡಿಒ ಬಲಭೀಮ ಪವಾರ ಸೇರಿದಂತೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಗುಂಜರರ್ಗಾ ಹಾಗೂ ಮಾಣಿಕೇಶ್ವರ ಗ್ರಾಮಸ್ಥರು ಇದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗ್ರಾಮ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವತ್ಛ ಭಾರತ ಮಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.