Advertisement

ಗಗನಸಖಿ ಕೊಂದವ ಸೆರೆ

03:22 PM Mar 15, 2023 | Team Udayavani |

ಬೆಂಗಳೂರು: ಇತ್ತೀಚೆಗೆ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಗಗನಸಖಿಯೊಬ್ಬರು ಮೃತಪಟ್ಟ ಘಟನೆ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಆಕೆಯ ಪ್ರೀಯಕರ ಆದೇಶ್‌ನನ್ನು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.

Advertisement

ಮೃತ ಅರ್ಚನಾ ಧಿಮಾನ್‌ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದರಿಂದ ಮದ್ಯದ ನಶೆಯಲ್ಲಿದ್ದ ಆಕೆಯನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ಹಿಮಾಚಲ ಪ್ರದೇಶ ಮೂಲದ ಅರ್ಚನಾ ಧಿಮಾನ್‌, ದುಬೈನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ಮಾ.10ರಂದು ತಡರಾತ್ರಿ ಪ್ರಿಯಕರ ಆದೇಶ್‌ ಜತೆ ಕೋರಮಂಗಲದ ಅಪಾರ್ಟ್‌ಮೆಂಟ್‌ನಲ್ಲಿ ಮದ್ಯ ಪಾರ್ಟಿ ಮಾಡಿದ್ದರು. ನಂತರ ತಡರಾತ್ರಿ 12.30ರ ಸುಮಾರಿಗೆ ನಾಲ್ಕನೇ ಮಹಡಿ ಬಳಿ ನಿಂತಿದ್ದ ಇಬ್ಬರು ಮದುವೆ ವಿಚಾರ ಚರ್ಚಿಸಿದ್ದಾರೆ. ಆಗ ಅರ್ಚನಾ ಧಿಮಾನ್‌, “ತನ್ನೊಂದಿಗೆ ನೀನು ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿರುವೆ. ಹೀಗಾಗಿ ತನ್ನನ್ನು ಮದುವೆಯಾಗುವಂತೆ ಕೋರಿದ್ದಾಳೆ. ಆದರೆ. ಆರೋಪಿ ಮದುವೆ ಸಾಧ್ಯವಿಲ್ಲ. ಡೇಟಿಂಗ್‌ ಮುಂದುವರಿಸೋಣ ಎಂದಿದ್ದಾನೆ. ಈ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ಹೋದಾಗ ಆರೋಪಿ ಆಕೆಯನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ಮದ್ಯದ ಅಮಲಿನಲ್ಲಿ ಘಟನೆ: ಆರೋಪಿ ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ಆಕೆ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿಕೆ ನೀಡಿದ್ದ. ಹೀಗಾಗಿ ಪೊಲೀಸರು ಮತ್ತೂಮ್ಮೆ ವಿಚಾರಣೆಗೆ ಬರಬೇಕೆಂದು ಸೂಚಿಸಿ, ಕಳುಹಿಸಿದ್ದರು. ಆದರೆ, ಆರೋಪಿ ಪೊಲೀಸರಿಗೆ ಮಾಹಿತಿ ನೀಡದೆ ಕಾಸರಗೋಡಿಗೆ ಹೋಗಿದ್ದ. ಮತ್ತೂಂದೆಡೆ ಅರ್ಚನಾ ಧಿಮಾನ್‌ ಪೋಷಕರು, ಕೊಲೆ ಪ್ರಕರಣ ದಾಖಲಿಸುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next