ನವದೆಹಲಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನಿಂದ ಅಶಿಸ್ತಿನ ವರ್ತನೆ, ಹಾಗೂ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಡಿಜಿಸಿಎ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಕಳೆದ ತಿಂಗಳು ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಯಿಂದ – ನ್ಯೂಯಾರ್ಕ್ ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಕುಡಿದ ಅಮಲಿನಲ್ಲಿ ತನ್ನ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆಯನ್ನು ವಿಮಾನಯಾನ ಸಂಸ್ಥೆ ತನ್ನ ಆಂತರಿಕ ಸಮಿತಿಗೆ ತಡವಾಗಿ ವರದಿ ಮಾಡಿದ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗೆ ಹತ್ತು ಲಕ್ಷ ದಂಡ ವಿಧಿಸಿದೆ.
ಇಷ್ಟು ಮಾತ್ರವಲ್ಲದೆ ಮೂತ್ರ ವಿಸರ್ಜನೆಯ ಪ್ರಕರಣ ನಡೆದ ಕೆಲವೇ ದಿನದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೋರ್ವ ಧೂಮಪಾನ ಮಾಡಿದ ಘಟನೆಯೂ ತಡವಾಗಿ ಬೆಳಕಿಗೆ ಬಂದಿದೆ ಈ ಎಲ್ಲಾ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಡಿಜಿಸಿಎ ಮುಂದಿನ ದಿನಗಳಲ್ಲಿ ವಿಮಾನಗಳಲ್ಲಿ ಈ ರೀತಿಯ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು, ವಿಮಾನದಲ್ಲಿ ಪ್ರಯಾಣಿಕರು ಅನುಚಿತವಾಗಿ ವರ್ತಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪನ; ದೆಹಲಿ, ರಾಜಸ್ಥಾನದಲ್ಲೂ ಕಂಪಿಸಿದ ಭೂಮಿ