ತಿರುವನಂತಪುರಂ: ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಏರ್ ಇಂಡಿಯಾ ವಿಮಾನ ಸಂಖ್ಯೆ AIC657 ಸುರಕ್ಷಿತವಾಗಿ ತಿರುವನಂತಪುರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದ್ದು ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಬಳಿಕ ವಿಮಾನವನ್ನು ತಪಾಸಣೆ ನಡೆಸಲಾಗುತ್ತಿದ್ದು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ 5.45ಕ್ಕೆ ಮುಂಬೈನಿಂದ ತಿರುವನಂತಪುರಕ್ಕೆ ವಿಮಾನ ಟೇಕ್ ಆಫ್ ಆಗಿತ್ತು. ವಿಮಾನ 8.10ಕ್ಕೆ ತಿರುವನಂತಪುರದಲ್ಲಿ ಇಳಿಯಬೇಕಿತ್ತು. ಆದರೆ ತಿರುವನಂತಪುರದಲ್ಲಿ ವಿಮಾನ ಇಳಿಯುವ ಮುನ್ನವೇ ಬಾಂಬ್ ಇಟ್ಟಿರುವ ಸಂದೇಶ ಬಂದಿದ್ದರಿಂದ ಪೈಲಟ್ ತಕ್ಷಣ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಮಾಹಿತಿ ನೀಡಿ ಎಂಟು ಗಂಟೆಗೆ ವಿಮಾನವನ್ನು ಲ್ಯಾಂಡಿಂಗ್ ಮಾಡಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನದಲ್ಲಿ 135 ಪ್ರಯಾಣಿಕರಿದ್ದರು ಎಲ್ಲರೂ ಸುರಕ್ಷಿತವಾಗಿದ್ದಾರೆ ಅಲ್ಲದೆ ಬಾಂಬ್ ಇಟ್ಟಿರುವ ಮಾಹಿತಿ ಸಿಗುತ್ತಿದ್ದಂತೆ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
ಇದನ್ನೂ ಓದಿ: Paris Paralympics: ಆ್ಯತ್ಲೆಟಿಕ್ಸ್‌ನಲ್ಲಿ ಡಜನ್ ಪದಕಗಳ ಗುರಿ