ಹೊಸದಿಲ್ಲಿ: ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಉಕ್ರೇನ್ ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನವು ಮಾರ್ಗಮಧ್ಯೆ ತಿರುಗಿ ದೆಹಲಿಗೆ ಬಂದಿದೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳ ಕಾರಣದಿಂದ ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ ನಂತರ ಏರ್ ಇಂಡಿಯಾ ವಿಮಾನ ಮರಳಿದೆ,
ರಷ್ಯಾದೊಂದಿಗಿನ ಸಂಘರ್ಷದ ನಡುವೆ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಭಾರತೀಯರು ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಲು ಕಾಯುತ್ತಿದ್ದಾರೆ.
ಉಕ್ರೇನ್‌ಗೆ ತೆರಳುವ ಎಲ್ಲಾ ವಿಮಾನಗಳ ವಿಮಾನಯಾನ ಸಿಬ್ಬಂದಿಗೆ ಸೂಚನೆ ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ಹಿಂತಿರುಗಲು ನಿರ್ಧರಿಸಿತು.
ಇದನ್ನೂ ಓದಿ:ಯುದ್ಧ ಘೋಷಣೆ ಬೆನ್ನಲ್ಲೇ ಕೈವ್ ನಗರದಲ್ಲಿ ಸ್ಫೋಟ; ಯುದ್ದ ತಡೆಯಿರಿ ಎಂದು ಉಕ್ರೇನ್ ಮನವಿ
ಪೂರ್ವ ಉಕ್ರೇನ್‌ನಲ್ಲಿ ದೊಡ್ಡ ಪ್ರಮಾಣದ ಮಿಲಿಟರಿ ಕಾರ್ಯಾಚರಣೆಗಳು ತೆರೆದುಕೊಳ್ಳುವುದರಿಂದ, ವಾಯುಪ್ರದೇಶದ ಅಸ್ತವ್ಯಸ್ತವಾಗಿರುವ ಸ್ವಭಾವದಿಂದಾಗಿ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿರುತ್ತವೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಿಗ್ಗೆ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದೆ. ಉಕ್ರೇನ್ ನ ಕೆಲವು ಪ್ರಾಂತ್ಯಗಳಲ್ಲಿ ಈಗಾಗಲೇ ದಾಳಿ ನಡೆಸಲಾಗಿದೆ.