Advertisement

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

04:57 PM Sep 21, 2024 | Team Udayavani |

ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Advertisement

ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು. ಪ್ರಸ್ತುತ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗುತ್ತಿದ್ದು ಅದೇ ದಿನ ನೂತನ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

27 ಅಕ್ಟೋಬರ್ 1964 ರಂದು ಜನಿಸಿದ ಅಮರ್ ಪ್ರೀತ್ ಸಿಂಗ್ ಅವರು 1984 ರ ಡಿಸೆಂಬರ್ ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಸ್ಟ್ರೀಮ್‌ಗೆ ನಿಯೋಜನೆಗೊಂಡರು. ಸುಮಾರು 40 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅವರು ವಿವಿಧ ಕಮಾಂಡ್, ಸಿಬ್ಬಂದಿ, ಸೂಚನಾ ಮತ್ತು ವಿದೇಶದಲ್ಲಿ ವಾಯುಪಡೆಯ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

5,000 ಗಂಟೆಗಳ ಹಾರಾಟದ ಅನುಭವ
ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜು ಮತ್ತು ರಾಷ್ಟ್ರೀಯ ರಕ್ಷಣಾ ಕಾಲೇಜಿನ ಹಳೆಯ ವಿದ್ಯಾರ್ಥಿ. ಅವರು ಅರ್ಹ ವಿಮಾನ ಬೋಧಕ ಮತ್ತು ಅದ್ಭುತ ಪೈಲಟ್. ಅವರು ಸ್ಥಿರ ಮತ್ತು ರೋಟರಿ ವಿಂಗ್ ವಿಮಾನಗಳಲ್ಲಿ ಸುಮಾರು 5,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ.

Advertisement

ಇದನ್ನೂ ಓದಿ: Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Advertisement

Udayavani is now on Telegram. Click here to join our channel and stay updated with the latest news.

Next