ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳಿರುವ ಕಾರಣದಿಂದಾಗಿ ಏರ್ ಶೋ ವನ್ನು ಲಕ್ನೋ ಗೆ ಸ್ಥಳಾಂದರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿರಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಭಾನುವಾರ ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಿಂದೆ ಕರ್ನಾಟಕದಲ್ಲಿ ಏರ್‌ಶೋ ನಡೆಸಲು ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ನೀಡಲಾಗಿದ್ದು, ಇಲ್ಲಿಂದ ಸ್ಥಳಾಂತರಿಸಲಾಗುತ್ತದೆ ಎಂದು ಕೇಳಿದ್ದೇನೆ. ಅಧಿಕೃತವಾಗಿ ನನಗಿನ್ನೂ ಮಾಹಿತಿ ಬಂದಿಲ್ಲ ಎಂದರು.
ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ 2ನೇ ಅತಿ ದೊಡ್ಡ “ಏರೋ ಶೋ’ ವೈಮಾನಿಕ ಪ್ರದರ್ಶನವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರಿಸಲಾಗಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ಏರೋ ಶೋ ನಡೆಯಬೇಕಿತ್ತು. ಇದನ್ನೀಗ, ಲಕ್ನೋದ “ಬಕ್ಷಿ ಕಾ ತಲಾಬ್’ ವಾಯು ನೆಲೆಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲದೆ, ಈ ವರ್ಷದ ಅ. 27ರಿಂದ ನ. 4ರೊಳಗೆ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ವರದಿ ಮಾಡಿದೆ
ನೀತಿ ಸಂಹಿತೆ ಅಡ್ಡಿಯಾಗಿದೆ
ನಾನು ಇಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಮಾಡಿ ಜನರ ಸಂಕಷ್ಟ ಆಲಿಸಬೇಕೆಂದಿದ್ದೆ ಆದರೆ ನಗರ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ನನಗೆ ಉಳಿಯಲಾಗುತ್ತಿಲ್ಲ .ಯಾರೂ ಅನ್ಯತಾ ಭಾವಿಸಬೇಡಿ ಎಂದರು.