Advertisement

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

09:43 PM Nov 20, 2024 | Team Udayavani |

ನವದೆಹಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ವಿರುದ್ಧ ಕೋರ್ಟ್‌ ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

Advertisement

ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಕರಣ ದಾಖಲಿಸಿತ್ತು. ವಿಚಾರಣಾ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿರುವ ಚಿದಂಬರಂಗೂ ನೋಟಿಸ್‌ ಜಾರಿ ಮಾಡಲಾಗಿದೆ.

ಈ ಪ್ರಕರಣದ ಸಂಬಂಧ ನೋಟಿಸ್‌ಗಳನ್ನು ನೀಡಲಾಗಿದ್ದು, ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ(ಚಿದಂಬರಂ) ಕೋರ್ಟ್‌ ನ್ಯಾಯಾಂಗ ಪ್ರಕ್ರಿಯೆಗಳಿಗೆ ತಡೆ ನೀಡಲಾಗುತ್ತಿದೆ. ಮುಂದಿನ ವಿಚಾರಣೆ ಜ.22ಕ್ಕೆ ನಿಗದಿಪಡಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next