Advertisement
ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ಈ ತೀರ್ಪನ್ನು ನೀಡಿದೆ. ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಶಿಫಾರಸನ್ನು ಪರಿಗಣಿಸಲಾಗಿದೆ.
ಯಾರು ಟ್ರಾವೆಲ್ ಏಜೆಂಟ್‌ಗಳ ಮೂಲಕ ಟಿಕೆಟ್ ಖರೀದಿ ಮಾಡಿರುತ್ತಾರೋ ಅಂಥವರು ಆ ಏಜೆಂಟ್ ಖಾತೆಗೆ ಹಣ ಜಮೆ ಆದ ಮೇಲೆ ವಾಪಸ್ ಪಡೆಯಬಹುದು ಎಂದು ಕೋರ್ಟ್ ಹೇಳಿದೆ. ಮುಂದಿನ ವರ್ಷದ ಮಾರ್ಚ್ 31ರ ಒಳಗೆ ಪ್ರಯಾಣಿಕರಿಗೆ ಹಣವನ್ನು ಹಿಂತಿರುಗಿಸಬೇಕು ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
Related Articles
Advertisement
ಲಾಕ್ ಡೌನ್ ಅವಧಿಯಲ್ಲಿ ಪ್ರಯಾಣ ಮಾಡುವುದಕ್ಕೆ ಅದೇ ಲಾಕ್‌ಡೌನ್ ಸಮಯದಲ್ಲಿ ಟಿಕೆಟ್ ಬುಕ್ ಮಾಡಿದ್ದಲ್ಲಿ ತತ್‌ಕ್ಷಣವೇ ಹಿಂತಿರುಗಿಸಬೇಕು. ಏರ್‌ಲೈನ್ಸ್‌ಗಳು ಅಂಥ ಟಿಕೆಟ್‌ಗಳನ್ನು ಬುಕ್ ಮಾಡುವಂತೆಯೇ ಇರಲಿಲ್ಲ, ಬುಕಿಂಗ್ ರದ್ದುಪಡಿಸಿದ್ದಕ್ಕಾಗಿ ವಿಮಾನಯಾನ ಸಂಸ್ಥೆಗಳು ಆದೇಶದ 15 ದಿನಗಳಲ್ಲಿ ಮರುಪಾವತಿ ನೀಡಬೇಕು ಎಂದು ಕೋರ್ಟ್ ಹೇಳಿದೆ.
ಹಣಕಾಸಿನ ತೊಂದರೆಯಿಂದಾಗಿ ಯಾವುದೇ ವಿಮಾನಯಾನ ಸಂಸ್ಥೆಗಳು ಇದನ್ನು ಪಾಲಿಸಲು ಸಾಧ್ಯವಾಗದಿದ್ದರೆ, ಪ್ರಯಾಣಿಕರಿಂದ ನೇರವಾಗಿ ಬುಕಿಂಗ್ ಮಾಡುವಾಗ ಪ್ರಯಾಣಿಕರ ಹೆಸರಿನಲ್ಲಿ ಅವರು ಸಂಗ್ರಹಿಸಿದ ಶುಲ್ಕದ ಮೊತ್ತಕ್ಕೆ ಸಮನಾದ ಕ್ರೆಡಿಟ್ ಶೆಲ್ ಅನ್ನು ಒದಗಿಸಬೇಕು. ಅಥವಾ 2021ರ ಮಾರ್ಚ್ 31ರಂದು ಅಥವಾ ಅದಕ್ಕೂ ಮೊದಲು ಅದನ್ನು ಬಳಸಲು ನೆರವಾಗಬೇಕು ಎಂದು ಹೇಳಿದೆ.
ಅಂತಹ ಕ್ರೆಡಿಟ್ ಶೆಲ್ ಅನ್ನು 2021ರ ಮಾರ್ಚ್ 31ರ ವರೆಗೆ ತನ್ನ ಆಯ್ಕೆಯ ಯಾವುದೇ ಮಾರ್ಗದಲ್ಲಿ ಬಳಸಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕ್ರೆಡಿಟ್ ಶೆಲ್ ಅನ್ನು ಟಿಕೆಟ್ ಖರೀದಿಸಿದ ಸಂಬಂಧಪಟ್ಟ ಏಜೆಂಟರು ಮೂರನೇ ವ್ಯಕ್ತಿಯ ಪ್ರಯಾಣಕ್ಕಾಗಿ ಬಳಸಿಕೊಳ್ಳಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.