Advertisement

ಮೇ 25ರಿಂದ ದೇಶೀಯ ವಿಮಾನ ಸಂಚಾರ ಆರಂಭ: ಕೇಂದ್ರ ವಿಮಾನಯಾನ ಸಚಿವಾಲಯ

07:58 PM May 20, 2020 | Nagendra Trasi |

ನವದೆಹಲಿ:ಕೋವಿಡ್ 19 ಲಾಕ್ ಡೌನ್ ಸಡಿಲಿಕೆ ನಡುವೆ ಮೇ 25ರಿಂದ ಕೆಲವೊಂದು ನಿರ್ದಿಷ್ಟ ಮಾರ್ಗಸೂಚಿಯೊಂದಿಗೆ ದೇಶೀಯ ವಿಮಾನ ಸಂಚಾರ ಕಾರ್ಯಾರಂಭಿಸಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಘೋಷಿಸಿದೆ.

Advertisement

ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಮಾರ್ಚ್ 25ರಿಂದ ಆರಂಭಗೊಂಡ ದಿನದಿಂದ ವಾಣಿಜ್ಯ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿತ್ತು.

ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದು, ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ಕಳುಹಿಸಲಾಗಿದೆ. ಮೇ 25ರಿಂದ ವಿಮಾನ ಸಂಚಾರ ಆರಂಭಿಸಲು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಪ್ರತ್ಯೇಕ ಮಾರ್ಗಸೂಚಿ ರವಾನಿಸಲಾಗುವುದು ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next