Advertisement

Airport: ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ”ಕ್ಕೆ ಮಂಜೂರು ನೀಡಿ

09:50 PM Jul 31, 2024 | Team Udayavani |

ಹೊಸದಿಲ್ಲಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವಲ್ಲಿ ಯಶಸ್ವಿಯಾದ ಸಂಸದ ಬಿ.ವೈ.ರಾಘವೇಂದ್ರ  ಈಗ ತಮ್ಮ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದಾರೆ.

Advertisement

ಹೊಸದಿಲ್ಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡುರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರು ಮಾಡಲು ಬುಧವಾರ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಒಡಗೂಡಿ  ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲು ಸಂಸದ ರಾಘವೇಂದ್ರ  ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next