Advertisement

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

12:33 AM Jul 08, 2024 | Team Udayavani |

ಬೆಂಗಳೂರು: ರಾಜ್ಯದ ರಾಜಧಾನಿಯ ಸಮೀಪ ಮತ್ತೂಂದು ವಿಮಾನ ನಿಲ್ದಾಣ ಅಗತ್ಯವಾಗಿದ್ದು, ಈ ಸಂಬಂಧ ಜಾಗದ ಹುಡುಕಾಟ ಶುರುವಾಗಿದೆ ಎಂದು ಮೂಲಸೌಕರ್ಯ ಅಭಿ ವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂಸ್ವಾಧೀನ, ಪರಿ ಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳ
ಬೇಕಾಗುತ್ತದೆ. ಮತ್ತೂಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜತೆ ವಿಚಾರ ವಿನಿಮಯ ನಡೆಸಿ ಅಂತಿ
ಮಗೊಳಿಸಲಾಗುವುದು ಎಂದರು.

ಒಪ್ಪಂದದ ಷರತ್ತು ಉಲ್ಲೇಖ
ಸದ್ಯಕ್ಕೆ ಬಿಐಎಎಲ್‌ ಜತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇನ್ನು 8 ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು.ಬಿಐಎಎಲ್‌ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು ಎಂದರು.

ಬಿಜೆಪಿ ಕಾಲದಲ್ಲಿ ಎಷ್ಟು ಹಗರಣ ಸಿಬಿಐಗೆ ಹೋಗಿದೆ?: ಎಂಬಿಪಾ
ಬೆಂಗಳೂರು: ಮುಖ್ಯಮಂತ್ರಿ ಮೇಲೆ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿರುವ ಬಿಜೆಪಿಯು ತನ್ನ ಅವಧಿಯಲ್ಲಿ ಎಷ್ಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದೆ ಎಂದು ಭಾರೀ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಪ್ರಶ್ನಿಸಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣ ಆರೋಪಕ್ಕೆ ಈಗಾಗಲೇ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಸಿಬಿಐ ತನಿಖೆಗೆ ಎಷ್ಟು ಪ್ರಕರಣಗಳನ್ನು ಕೊಡಲಾಗಿತ್ತು? ಎಂದು ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next