Advertisement

ರಾಜ್ಯದ ಐದು ಕಡೆ ವಿಮಾನ ನಿಲ್ದಾಣ: ನಿರಾಣಿ

02:12 PM Mar 15, 2023 | Team Udayavani |

ಕಲಬುರಗಿ: ರಾಜ್ಯದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯದ ಐದು ಕಡೆ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

Advertisement

ಇಲ್ಲಿನ ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರ ನಡೆದ ಕೇಂದ್ರ ಸರ್ಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಈಚೆಗೆ ಶಿವಮೊಗ್ಗ ವಿಮಾನ ನಿಲ್ದಾಣ ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ನಾಡಿಗೆ ಸಮರ್ಪಿಸಿದ್ದಾರೆ ಎಂದರು.

ಹಾಸನ, ವಿಜಯಪುರ ವಿಮಾನ ನಿಲ್ದಾಣ ಕಾರ್ಯ ಭರದಿಂದ ಸಾಗಿದ್ದು, ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು. ಪ್ರಮುಖವಾಗಿ ದಾವಣಗೆರೆ, ಬಾಗಲಕೋಟ ಜಿಲ್ಲೆಯ ಬಾದಾಮಿ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕಮಗಳೂರದಲ್ಲಿ ವಿಮಾನ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವ ನಿರಾಣಿ ವಿವರಣೆ ನೀಡಿದರು.

ಇದನ್ನೂ ಓದಿ: ಶ್ರದ್ದಾಂಜಲಿ ಪೂರ್ವ ಸಭೆಯಲ್ಲೂ ಕೇಳಿಬಂತು ಧ್ರುವನಾರಾಯಣ ಪುತ್ರನ ಟಿಕೆಟ್ ಕೂಗು

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪೂರಕವಾಗುವ ಮೆಗಾ ಟೆಕ್ಸ್ ಟೈಲ್ ಪಾಕ್೯ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ. ಈ ಉದ್ಯಮ ಪ್ರಾರಂಭವಾದಲ್ಲಿ 25 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ದೊರಕಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

ವಾರದೊಳಗೆ ಪರಿಹಾರ ವಿತರಣೆ: ನೆಟೆರೋಗ ದಿಂದ ಹಾಳಾಗಿರುವ ತೊಗರಿಗೆ ಪರಿಹಾರ ಹಣ ವಾರದೊಳಗೆ ರೈತರ ಖಾತೆಗೆ ಜಮಾ ಆಗಲಿದೆ. ಹೆಕ್ಟೇರ್ ಗೆ 10 ಸಾವಿರ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಯಲ್ಲದೇ ಪರಿಹಾರ ಬಿಡುಗಡೆಗೆ ರಾಜ್ಯ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಹೀಗಾಗಿ ವಾರದೊಳಗೆ ಹಣ ರೈತರ ಕೈಗೆ ಸೇರಲಿದೆ ಎಂದು ಎಂದು ಹೇಳಿದರು.

ಕೇಂದ್ರದ ಸಚಿವ ಡಾ. ವಿ.ಕೆ.ಸಿಂಗ್ ಸೇರಿದಂತೆ ಮುಂತಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next