ಗಾಜಾ: ಗಾಜಾದಿಂದ ಸ್ಥಳಾಂತರಗೊಂಡು ಶಾಲೆಯಲ್ಲಿ ಆಶ್ರಯ ಪಡೆಯುತಿದ್ದವರನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ಪರಿಣಾಮ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಡಜನ್ ಗಟ್ಟಲೆ ಜನರು ಗಾಯಗೊಂಡಿರುವುದಾಗಿ ಪ್ಯಾಲೇಸ್ಟಿನಿಯನ್ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ನಿರಾಶ್ರಿತರು ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವಾಗ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎನ್ನಲಾಗಿದ್ದು ಇದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
ಇಸ್ರೇಲ್ ಕಳೆದ ವಾರ ಗಾಜಾದಲ್ಲಿರುವ ನಾಲ್ಕು ಶಾಲೆಗಳ ಮೇಲೆ ವೈಮಾನಿಕ ದಾಳಿಯನ್ನು ನಡೆಸಿತ್ತು ಎನ್ನಲಾಗಿದ್ದು ಇದೀಗ ಮತ್ತೊಂದು ಶಾಲೆಯ ಮೇಲೆ ದಾಳಿ ನಡೆಸಿದೆ.
ಆಗಸ್ಟ್ 4 ರಂದು, ಗಾಜಾ ನಗರದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತರಿಗೆ ಆಶ್ರಯ ನೀಡಿದ್ದ ಶಾಲೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು ಈ ವೇಳೆ 30 ಮಂದಿ ಮೃತಪಟ್ಟಿದ್ದರು ಮತ್ತು ಹಲವು ಮಂದಿ ಗಾಯಗೊಂಡಿದ್ದರು ಅಲ್ಲದೆ ಆಗಸ್ಟ್ 3 ರಂದು ಮತ್ತೊಂದು ಶಾಲೆಯ ಮೇಲೆ ನಡೆಸಿದ ದಾಳಿಯಲ್ಲಿ 17 ಜನರು ಸಾವನ್ನಪಿದ್ದರು.
ಇದನ್ನೂ ಓದಿ: Landslide: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ… ರೈಲು ಸಂಚಾರ ಸ್ಥಗಿತ