Advertisement

ಎಐಎಸ್‌ಎಫ್‌ ಕಾರ್ಯಕರ್ತರ ಪ್ರತಿಭಟನೆ

10:28 AM Jul 21, 2020 | Suhan S |

ದಾವಣಗೆರೆ: ರಾಜ್ಯ ಸರ್ಕಾರ ಆನ್‌ಲೈನ್‌ ಶಿಕ್ಷಣ ಕೈ ಬಿಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಐಎಸ್‌ಎಫ್‌) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ತನ್ನದೇ ಆದ ಶಾಲಾ-ಕಾಲೇಜುಗಳಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಅತ್ಯಗತ್ಯ ಮೂಲ ಸೌಲಭ್ಯಗಳ ಬಗ್ಗೆ ಚಿಂತನೆ ನಡೆಸದೆ ಏಕಾಏಕಿ ಆನ್‌ಲೈನ್‌ ಶಿಕ್ಷಣ ಪದ್ಧತಿಗೆ ಮುಂದಾಗಿರುವುದು ಅತ್ಯಂತ ಖಂಡನೀಯ. ಕೂಡಲೇ ಆನ್‌ಲೈನ್‌ ಶಿಕ್ಷಣ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿನ ಸಾವಿರಾರು ಸರ್ಕಾರಿ ಶಾಲೆಗಳಲ್ಲಿ ಸರಿಯಾಗಿ ಕೊಠಡಿಗಳೇ ಇಲ್ಲ. ಕೊಠಡಿಗಳಿದ್ದರೂ ಬಾಗಿಲು, ಕಿಟಕಿ ಇಲ್ಲದಂತಹ ಶಾಲೆಗಳೂ ಇವೆ. ಸರ್ಕಾರ ಅಗತ್ಯ ಮೂಲ ಸೌಲಭ್ಯ ಒದಗಿಸದೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಕ್ತಾರರಂತೆ ಆನ್‌ಲೈನ್‌ ಶಿಕ್ಷಣ ಜಾರಿಗೆ ಮುಂದಾಗಿರುವುದು ದುರಂತದ ವಿಚಾರ ಎಂದರು.

ದಾವಣಗೆರೆಯ ಜೆಜೆಎಂ ವಿದ್ಯಾರ್ಥಿಗಳ ಬಾಕಿ ಉಳಿಸಿಕೊಂಡಿರುವ 16 ತಿಂಗಳ ಶಿಷ್ಯವೇತನ ಕೂಡಲೇ ಬಿಡುಗಡೆ ಮಾಡಬೇಕು. ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ರಾಷ್ಟ್ರೀಕರಣ ಮಾಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next