Advertisement

ಪೊನ್ನಿಯನ್ ಸೆಲ್ವನ್ -2 ಚಿತ್ರಕ್ಕಾಗಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು ಗೊತ್ತಾ?

04:05 PM May 12, 2023 | Team Udayavani |

ವಿಶ್ವದ ಅತ್ಯಂತ ಸುಂದರ ನಟಿಯರಲ್ಲಿ ಒಬ್ಬರಾದ ಐಶ್ವರ್ಯಾ ರೈ ಬಚ್ಚನ್ ಇತ್ತೀಚೆಗೆ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 (PS 2) ನಲ್ಲಿ ಅಭಿನಯದ ಮೂಲಕ ಮತ್ತೊಮ್ಮೆ ತಮ್ಮ ಅಭಿಮಾನಿಗಳನ್ನು ಗೆದ್ದಿದ್ದಾರೆ.

Advertisement

ಐತಿಹಾಸಿಕ ಕಥಾಹಂದರ ಚಿತ್ರದಲ್ಲಿ ಐಶ್ವರ್ಯ ರೈ ಅವರು ನಂದಿನಿ ಎಂಬ ಪಾತ್ರದಲ್ಲಿ ಮಿಂಚಿದ್ದಾರೆ. ಚೋಳ ಸಾಮ್ರಾಜ್ಯದ ಕಥೆಯುಳ್ಳ ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ಜತೆಗೆ, ಚಿಯಾನ್ ವಿಕ್ರಮ್, ಕಾರ್ತಿ, ತ್ರಿಶಾ ಕೃಷ್ಣನ್ ಮತ್ತು ಸೋಭಿತಾ ಧೂಳಿಪಾಲ, ಐಶ್ವರ್ಯ ಲಕ್ಷ್ಮಿ ಮತ್ತು ಜಯಂ ರವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕೆಲವು ದಿನಗಳ ಹಿಂದೆ ತೆರೆಕಂಡ ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ರೂಪಾಯಿಗಳನ್ನು ಗಳಿಸಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್ ಕಟ್ ಹೇಳಿದ ಚಿತ್ರಕ್ಕೆ ಎ ಆರ್ ರಹಮಾನ್ ಸಂಗೀತವಿದೆ. ಚಿತ್ರದ ಮೊದಲ ಭಾಗವೂ ಸೂಪರ್ ಹಿಟ್ ಆಗಿತ್ತು.

ಐಶ್ವರ್ಯಾ ರೈ ಮತ್ತು ಇತರ ತಾರಾ ಬಳಗದ ಸದಸ್ಯರ ಸಂಭಾವನೆಗಳ ಬಗ್ಗೆ ವರದಿಗಳು ಇಂಟರ್ನೆಟ್ ನಲ್ಲಿ ಸುತ್ತುತ್ತಿವೆ. ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಪಿಎಸ್ 2 ನಲ್ಲಿ ಕ್ವೀನ್ ನಂದಿನಿ ಪಾತ್ರಕ್ಕಾಗಿ ಐಶ್ವರ್ಯಾ 10 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಅಲ್ಲದೆ, ಪ್ರಮುಖ ನಟ ಚಿಯಾನ್ ವಿಕ್ರಮ್ ಅವರು 12 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಇವರಿಬ್ಬರು ಪೊನ್ನಿಯಿನ್ ಸೆಲ್ವನ್ 2 ತಂಡದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಟರಾಗಿದ್ದಾರೆ,

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next