Advertisement

Divorce; ಧನುಷ್-ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ

11:26 PM Apr 08, 2024 | Team Udayavani |

ಚೆನ್ನೈ: ನಟ-ನಿರ್ದೇಶಕ ಧನುಷ್ ಮತ್ತು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ – ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ದಂಪತಿಗಳ ನಿಕಟ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

Advertisement

2022ರ ಜನವರಿಯಲ್ಲಿ ಇಬ್ಬರೂ ಬೇರೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದರು. ಆ ಸಮಯದಲ್ಲಿ ಅವರ ಘೋಷಣೆಯು ಅವರ ಅಭಿಮಾನಿಗಳಿಗೆ ಭಾರಿ ಆಘಾತವನ್ನುಂಟುಮಾಡಿತ್ತು.

ಒಂದೂವರೆ ವರ್ಷದ ನಂತರ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವರ ಪ್ರಕರಣದ ವಿಚಾರಣೆ ನಡೆಯಲಿದೆ. ಕಳೆದ ಎರಡು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸವಾಗಿದ್ದರು.

2022 ಜನವರಿ 17, ರಂದು, ಧನುಷ್ ಬೇರೆ ಬೇರೆಯಾಗುವುದನ್ನು ಎಕ್ಸ್ ನಲ್ಲಿ ಘೋಷಿಸಿದ್ದರು. 18 ವರ್ಷಗಳ ದಾಂಪತ್ಯ ಜೀವನದ ನಂತರ ಇಬ್ಬರೂ ದೂರವಾಗಿದ್ದರು.

ಧನುಷ್ ಮತ್ತು ಐಶ್ವರ್ಯ ಅವರು ಕ್ರಮವಾಗಿ 21 ಮತ್ತು 23 ವರ್ಷದವರಾಗಿದ್ದಾಗ 2004 ರಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು. ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next