Advertisement

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

02:29 PM Jun 30, 2024 | Team Udayavani |

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್‌ ನಿರ್ಮಾಣದ ಹಾಗೂ ಎಂ.ಶಶಿಧರ್‌ ನಿರ್ದೇಶನದ “ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಮುಗಿದುದೆ. ಈಗಾಗಲೇ ಚಿತ್ರದ ಮೊದಲ ಪ್ರತಿ ನೋಡಿದ ನಿರ್ಮಾಪಕರು ಖುಷಿಯಾಗಿದ್ದಾರೆ. ಇದರ ಪರಿಣಾಮ ಚಿತ್ರದ ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ್ದಾರೆ.

Advertisement

ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ.

ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚೂನರ್‌ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ ಎಂದು ನಿರ್ಮಾಪಕ ರವಿರಾಜ್‌ ತಿಳಿಸಿದ್ದಾರೆ. ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿದ್ದಾರೆ ನಿರ್ಮಾಪಕ ರವಿರಾಜ್‌.

ಬಾಲಿವುಡ್‌ನ‌ ಖ್ಯಾತ ನಟ ಶ್ರೇಯಸ್‌ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್‌ ರಮೇಶ್‌, ಸುನೀಲ್, ಆದಿತ್ಯ ಮೆನನ್‌, ರಾಘವೇಂದ್ರ ಶ್ರವಣ್‌, ವಿನಯಾಪ್ರಸಾದ್‌ ಮುಂತಾದವರು ಈ ಚಿತ್ರದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್‌ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next