Advertisement

ಅಜೆಕಾರು ಕಲಾಭಿಮಾನಿ ಬಳಗ: ತಾಳಮದ್ದಳೆಗೆ ಚಾಲನೆ

05:38 PM Jul 15, 2018 | Team Udayavani |

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ವಾರ್ಷಿಕ ಸರಣಿ ತಾಳಮದ್ದಳೆಯು ಜು. 14 ರಂದು ಚಾಲನೆಗೊಂಡಿತು. ಅಪರಾಹ್ನ 4 ರಿಂದ ಕಾಂಜೂರ್‌ಮಾರ್ಗ ಪೂರ್ವದ ಶ್ರೀ ಅಂಬಿಕಾ ಮಂದಿರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಅಂಬಿಕಾ ಮಂದಿರದ ಶ್ರೀ ಅನಂತ ಭಟ್‌ ಆಶೀರ್ವಚನ ನೀಡಿದರು.

Advertisement

ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಮಾನಸ ಮುಂಬಯಿ ಅಧ್ಯಕ್ಷ ಶೇಖರ್‌ ಶೆಟ್ಟಿ ವಹಿಸಿದ್ದರು. ಮುಖ್ಯ  ಅತಿಥಿಗಳಾಗಿ ಶ್ರೀ ಅಂಬಿಕಾ ಮಂದಿರದ ಕಾರ್ಯಾಧ್ಯಕ್ಷ ರಾಜೇಶ್‌ ಶೆಟ್ಟಿ, ಗುರುದೇವಾ ಸೇವಾ ಬಳಗ ಥಾಣೆ ಘಟಕದ ಅಧ್ಯಕ್ಷ ಗುಣಪಾಲ್‌ ಎಸ್‌. ಶೆಟ್ಟಿ, ಶ್ರೀ ಅಂಬಿಕಾ ಮಂದಿರದ ಅಧ್ಯಕ್ಷ ಶಂಕರ ಪೂಜಾರಿ, ಕರ್ನಾಟಕ ಬ್ಯಾಂಕ್‌ ಮುಲುಂಡ್‌ ಶಾಖೆಯ ಮ್ಯಾನೇಜರ್‌ ನಾಗೇಂದ್ರ ಎನ್‌. ಎಸ್‌., ಶ್ರೀ ಅಂಬಿಕಾ ಮಂದಿರದ ಉಪ ಕಾರ್ಯಾಧ್ಯಕ್ಷ ಸುಂದರ ಎಂ. ಶೆಟ್ಟಿ, ಕಾರ್ಯದರ್ಶಿ ಶೇಖರ್‌ ಶೆಟ್ಟಿಗಾರ್‌, ಜನಪ್ರಿಯ ಯಕ್ಷಗಾನ ಮಂಡಳಿ ಕುರ್ಲಾ ಅಧ್ಯಕ್ಷ ರವೀಂದ್ರ ಪೈ ಅವರು ಪಾಲ್ಗೊಂಡಿದ್ದರು.

ಉದ್ಘಾಟನ ಸಮಾರಂಭದ ವೇದಿಕೆಯಲ್ಲಿ ಅಜೆಕಾರು ಕಲಾಭಿ ಮಾನಿ ಬಳಗದ ಸಂಸ್ಥಾಪಕಾಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ  ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರುಗಳಿಂದ ಭೀಷ್ಮ ವಿಜಯ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕು| ಕಾವ್ಯಶ್ರೀ ಅಜೇರು, ಚೆಂಡೆಯಲ್ಲಿ ಪ್ರಶಾಂತ್‌ ವಗೆನಾಡು, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಭಟ್‌ ಬಳಂತಿಮೊಗರು, ಶ್ಯಾಮ್‌ ಭಟ್‌ ಪಕಳಕುಂಜ, ಅವಿನಾಶ್‌ ಶೆಟ್ಟಿ ಉಬರಡ್ಕ ಇವರು ಪಾಲ್ಗೊಂಡಿದ್ದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ದಿನೇಶ್‌ ಶೆಟ್ಟಿ ವಿಕ್ರೋಲಿ ಸಹಕರಿಸಿ ದರು. ಕಾಂಜೂರ್‌ಮಾರ್ಗ ಪೂರ್ವದ ಶ್ರೀ ಅಂಬಿಕಾ ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕಲಾಭಿಮಾನಿಗಳು, ತುಳು- ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಜು. 21 ರವರೆಗೆ ನಗರ ಮತ್ತು ಉಪನಗರಗಳ ವಿವಿಧೆಡೆ ಗಳಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಜು. 15 ರಂದು ಬೊರಿವಲಿ ಪಶ್ಚಿಮದ ಜಯರಾಜ್‌ ನಗರದ  ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಅಪರಾಹ್ನ 3.30 ರಿಂದ ಶ್ರೀ ರಾಮಪಟ್ಟಾಭಿಷೇಕ ಯಕ್ಷಗಾನ ತಾಳಮದ್ದಳೆ ನೆರವೇರಲಿದೆ.

 ಚಿತ್ರ-ವರದಿ : ಸುಭಾಷ್‌ ಶಿರಿಯಾ

Advertisement
Advertisement

Udayavani is now on Telegram. Click here to join our channel and stay updated with the latest news.

Next