ರಾಜಸ್ತಾನ: ಜೀಪ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದಾರುಣ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ರಾಜಸ್ಥಾನದ ಚಿತ್ತೋರ್ ಗಢ ಜಿಲ್ಲೆಯಲ್ಲಿ ಶನಿವಾರ ರಾತ್ರಿ (ಡಿ.12) ನಡೆದಿದೆ.
ಸುಧಾಲ್ಖೇರಾ ಬಳಿಯ ಉದಯ್ ಪುರ್ ಮತ್ತು ನಿಂಬಾಹೇರಾ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಚಿತ್ತೋರ್ ಗಢ ಎಸ್ ಪಿ ದೀಪಕ್ ಭಾರ್ಗವ್, ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೊದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಚಿತ್ತೋರ್ ಗಢದ ನಿಕುಂಭು ನಲ್ಲಿ ಸಂಭವಿಸಿದ ಅಪಘಾತದದಲ್ಲಿ ಕೆಲವರು ಪ್ರಾಣ ಕಳೆದುಕೊಂಡ ಬಗ್ಗೆ ನನಗೆ ನೋವಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
Related Articles
ಘಟನೆಯ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಆಶೋಕ್ ಗೆಹ್ಲೋಟ್ ಕೂಡ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಹಲವರು ಪ್ರಾಣ ತ್ಯೆಜಿಸಿದ್ದಾರೆ. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.