Advertisement
ಸೆ. 25ರಂದು ಅಪರಾಹ್ನ ಘಾಟ್ಕೋಪರ್ ಪೂರ್ವ, ಪಂತನಗರದ ಕನ್ನಡ ವೆಲ್ಫೆàರ್ ಸೊಸೈಟಿಯ ಮಹೇಶ್ ಎಸ್. ಶೆಟ್ಟಿ (ಬಾಬಾಗ್ರೂಪ್) ಸಭಾಂಗಣದಲ್ಲಿ ಕನ್ನಡ ವೆಲ್ಪೇರ್ ಸೊಸೈಟಿ ಘಾಟ್ಕೊàಪರ್ ಇದರ ಆಶ್ರಯದಲ್ಲಿ ಜರಗಿದ ಯಕ್ಷಗುರು, ಕಲಾ ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಸಂಚಾಲಕತ್ವದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸರಣಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಘಾಟ್‌ಕೋಪರ್ ಕನ್ನಡ ವೆಲ್ಫೆàರ್ ಸೊಸೈಟಿಯು ಸದಾ ಒಂದಲ್ಲ ಒಂದು ಕಾರ್ಯಕ್ರಮಗಳಿಂದ ಸಕ್ರಿಯವಾಗಿರುತ್ತದೆ. ಸಂಸ್ಥೆಯ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳು ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ನುಡಿದು ಅಜೆಕಾರು ಕಲಾಭಿಮಾನಿ ಬಳಗದ ಸರಣಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಲಿ ಎಂದು ನುಡಿದು ಶುಭಹಾರೈಸಿದರು.
Related Articles
Advertisement
ಕನ್ನಡ ವೆಲ್ಪೇರ್ ಸೊಸೈಟಿಯ ಉಪಾಧ್ಯಕ್ಷ ಜಯರಾಜ್ ಜೈನ್, ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ಹರೀಶ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ದಯಾನಂದ ಶೆಟ್ಟಿ, ಜತೆ ಕೋಶಾಧಿಕಾರಿ ತಿಮ್ಮದೇವಾಡಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್. ಶೆಟ್ಟಿ ಪಾಲ್ಗೊಂಡಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು, ಸಂಸ್ಥೆಯ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ತುಳು-ಕನ್ನಡಿಗರು, ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ, ಅತಿಥಿಗಳಾಗಿ ಪಾಲ್ಗೊಂಡ ಶಾಂತಾರಾಮ ಶೆಟ್ಟಿ, ರವೀಂದ್ರನಾಥ ಎಂ. ಭಂಡಾರಿ, ಅಶೋಕ್ ಪಕ್ಕಳ, ನಂದಳಿಕೆ ನಾರಾಯಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಅರ್ಥದಾರಿ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ನಿರ್ವಹಿಸಿದರು. ಉದ್ಘಾಟನ ಕಾರ್ಯಕ್ರಮದ ಬಳಿಕ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ತವರೂರ ನಾಮಾಂಕಿತ ಕಲಾವಿದರ ಕೂಡುವಿಕೆಯಲ್ಲಿ “ಶ್ರೀರಾಮ ಪಟ್ಟಾಭಿಷೇಕ’ ಯಕ್ಷಗಾನ ತಾಳಮದ್ದಳೆಯು ಪ್ರಸ್ತುತಗೊಂಡಿತು.
ಹಿಮ್ಮೇಳದಲ್ಲಿ ಭಾಗವತರಾಗಿ ದೇವಿಪ್ರಸಾದ್ ಆಳ್ವ ತಲಪಾಡಿ, ಚೆಂಡೆಯಲ್ಲಿ ಸುಬ್ರಹ್ಮಣ್ಯ ಭಟ್ ದೇಲಂತಮಜಲು, ಮದ್ದಳೆಯಲ್ಲಿ ಪ್ರಶಾಂತ್ ಶೆಟ್ಟಿ ವಗೆನಾಡು ಮುಮ್ಮೇಳದಲ್ಲಿ ಅರ್ಥದಾರಿಗಳಾಗಿ ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬೊಳಂತಿಮೊಗರು, ದಿನೇಶ್ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ ಮೊದಲಾದವರು ಭಾಗವಹಿಸಿದ್ದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಸ್ಥೆಯು ಕಲೆಗೆ ಯಾವಾಗಲೂ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಕನ್ನಡ ವೆಲ್ಫೇರ್ ಸೊಸೈಟಿಯಲ್ಲಿ ಸದಾ ಸಕ್ರಿಯರಾಗಿದ್ದು, ನಮಗೆಲ್ಲಾ ಯಕ್ಷಗುರುಗಳೂ ಆಗಿದ್ದಾರೆ. ಮುಂಬಯಿಯ ನೂರಾರು ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿದಂತಹ ಮಹಾನ್ ವ್ಯಕ್ತಿಯಾಗಿರುವ ಅವರ ಸಂಚಾಲಕತ್ವದಲ್ಲಿ ಈ ಸರಣಿ ತಾಳಮದ್ದಳೆ ಕಾರ್ಯಕ್ರಮವನ್ನು ಕನ್ನಡ ವೆಲ್ಫೆàರ್ ಸೊಸೈಟಿಯಲ್ಲಿ ಉದ್ಘಾಟಿಸುತ್ತಿರುವುದು ನಮಗೆ ಹೆಮ್ಮೆಯಾಗುತ್ತಿದೆ. ನಮ್ಮ ಸಂಸ್ಥೆಯು ಕಳೆದ ಐದು ದಶಕಗಳಿಂದ ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳೊಂದಿಗೆ ಕಲೆ, ಕಲಾವಿದರನ್ನು ಸದಾ ಪ್ರೋತ್ಸಾಹಿಸಿ, ಗೌರವಿಸುತ್ತಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಒಂದುವರೆ ವರ್ಷಗಳ ಬಳಿಕ ಊರಿನ ಪ್ರಸಿದ್ಧ ಕಲಾವಿದರಿಂದ ಸರಣಿ ಯಕ್ಷಗಾನ ತಾಳಮದ್ದಳೆ ನಡೆಯುತ್ತಿರುವುದು ಅಭಿಮಾನ ಸಂಗತಿಯಾಗಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಎಲ್ಲ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದವರು ಸಹಕರಿಸಿದ್ದು, ಅವರೆಲ್ಲರನ್ನು ಅಭಿನಂದಿಸುತ್ತಿದ್ದೇನೆ.–ನವೀನ್ ಶೆಟ್ಟಿ ಇನ್ನಬಾಳಿಕೆ, ಅಧ್ಯಕ್ಷರು, ಕನ್ನಡ ವೆಲ್ಫೇರ್ ಸೊಸೈಟಿ ಘಾಟ್‌ಕೋಪರ್
ಚಿತ್ರ-ವರದಿ: ಸುಭಾಷ್ ಶಿರಿಯಾ