Advertisement

ನೀಗಲಿದೆ ಕುಡಿಯುವ ನೀರಿನ ಬವಣೆ

06:23 PM May 13, 2020 | Naveen |

ಅಜ್ಜಂಪುರ: ಭದ್ರಾ ಮೇಲ್ದಂಡೆ ಯೋಜನೆಯಿಂದ ಹಲವು ಜಿಲ್ಲೆಗಳ ಜನರ ಕುಡಿಯುವ ನೀರಿನ ಭವಣೆ ನೀಗಲಿದೆ. ಹಾಗಾಗಿ ತ್ವರಿತಗತಿಯ ಕಾಮಗಾರಿಗೆ ಸೂಚಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದರು.

Advertisement

ಅಜ್ಜಂಪುರ ಸಮೀಪದ ಹೆಬ್ಬೂರು ಗ್ರಾಮದ ಬಳಿ ಮಂಗಳವಾರ ನಡೆಯುತ್ತಿರುವ ಭದ್ರ ಮೇಲ್ದಂಡೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಕಾಮಗಾರಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರವಿದೆ. ಹಣಕಾಸಿನ ಸಮಸ್ಯೆಯಿಲ್ಲ. ಮುಖ್ಯಮಂತ್ರಿಗಳು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಕಾಮಗಾರಿ ಕಳಪೆ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ. ಆ ರೀತಿ ದೂರು ಬಂದರೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಭದ್ರ ಮೇಲ್ದಂಡೆ ಕಾಮಗಾರಿಯಿಂದ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಅಧಿಕಾರಿಗಳು ಇತ್ತ ತಿರುಗಿ ನೋಡುತ್ತಿಲ್ಲ. ಕೂಡಲೇ ಪರಿಹಾರ ಕೊಡಿಸಿ ಎಂದು ರೈತರು ಮನವಿ ಮಾಡಿದರು.

ಇನ್ನೂ ಭದ್ರ ಮೇಲ್ದಂಡೆ ಯೋಜನೆ ಯಡಿ ಅಜ್ಜಂಪುರ ತಾಲೂಕಿನ ಸುಮಾರು 21 ಸಾವಿರ ಎಕರೆ ಪ್ರದೇಶಕ್ಕೆ ಹನಿ ನೀರಾವರಿ ಕಲ್ಪಿಸುವ ಕಾಮಗಾರಿ ನಡೆಯುತ್ತಿದ್ದು, ಇದು ಸಹ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದರಿಂದ ರೈತರಿಗೆ ಲಾಭಕ್ಕಿಂತ ನಷ್ಟವೇ ಜಾಸ್ತಿ ಎಂದು ರೈತ ಮಾರುತಿ ಅಸಮಧಾನ ವ್ಯಕ್ತಪಡಿಸಿದರು. ಹೆಬ್ಬೂರು ಗ್ರಾಮದ ಬಳಿ ರೈಲ್ವೆ ಅಂಡರ್‌ ಪಾಸ್‌ ರಸ್ತೆ ಕಾಮಾಗಾರಿ ನಡೆಯುತ್ತಿದ್ದು, ಇದು ಸಂಪೂರ್ಣವಾಗಿ ಕಳಪೆಯಾಗಿದೆ. ಇದರಿಂದ ಮಳೆಗಾಲದ ಪರಿಸ್ಥಿತಿಯಲ್ಲಿ ಈ ಭಾಗದಲ್ಲಿ ಸಂಚರಿಸುವ ಸಾವಿರಾರು ವಾಹನಗಳಿಗೆ ರೈತರಿಗೆ ಜಮೀನಿಗೆ ತೆರಳಲು ಸಾಕಷ್ಟು ತೊಂದರೆಯಾಗುತ್ತಿದೆ. ಸಚಿವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹೆಬ್ಬೂರು ಗ್ರಾಮಸ್ಥರು ಸಚಿವರ ಕಾರು ತಡೆದು ಘೇರಾವ್‌ ಹಾಕಿದರು. ಸಚಿವರು ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next