ಅರಂತೋಡು: ಅಜ್ಜಾವರ ಗ್ರಾಮದ ಇರಂತಮಜಲು ಎಂಬಲ್ಲಿ ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ರವಿವಾರ ವರದಿಯಾಗಿದೆ.
ಮಂಡೆಕೋಲಿನ ಭವಾನಿಶಂಕರ್ ಅವರು ಬೈಕ್‌ನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುಳ್ಯಕ್ಕೆ ಬರುತ್ತಿರುವಾಗ ಅಜ್ಜಾವರ ಗ್ರಾಮದ ಇರಂತಮಜಲು ಎಂಬಲ್ಲಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿದೆ.
ಬೈಕ್‌ನಲ್ಲಿದ್ದ ಭವಾನಿಶಂಕರ್ ಅವರ ಪತ್ನಿ ಹಾಗೂ ಮಕ್ಕಳು ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದರು. ವೈದ್ಯರ ಸಲಹೆ ಮೇರೆಗೆ ಮೂವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.