ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಅಜ್ಮೀರ್ ದರ್ಗಾ ಮುಖ್ಯಸ್ಥರಾದ ಸೈಯದ್ ಜೈನುಲ್ ಅಬೇದಿನ್ ಸಲಹೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ಜ್ಞಾನವಾಪಿ, ಮಥುರಾ ಶಾಹಿ ಈದ್ಗಾ ಮಸೀದಿಗಳಿಗೆ ಸಂಬಂಧಿಸಿದ ವಿವಾದಗಳನ್ನು ನ್ಯಾಯಾಲಯಕ್ಕೆ ಮೊರೆ ಹೋಗುವ ಬದಲು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಅಜ್ಮೀರ್ ದರ್ಗಾ ಮುಖ್ಯಸ್ಥರು ಸಲಹೆಯನ್ನು ನೀಡಿದ್ದಾರೆ. ಯಾವುದೇ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಅಖಿಲ ಭಾರತ ಸೂಫಿ ಸಜ್ಜದಾನಶಿನ್ ಕೌನ್ಸಿಲ್‌ನ ರಾಜಸ್ಥಾನ ಘಟಕವು ಆಯೋಜಿಸಿದ್ದ “ಪೈಗಮ್-ಎ-ಮೊಹಬ್ಬತ್ ಹಮ್ ಸಬ್ ಕಾ ಭಾರತ್” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಬೇದಿನ್, ವಸುಧೈವ ಕುಟುಂಬಕಂ ನಾಗರಿಕತೆಯನ್ನು ಅನುಸರಿಸುವ ಮೂಲಕ ವಿಶ್ವದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಭಾರತವು ಸಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ.
ಈ ನಿಟ್ಟಿನಲ್ಲಿ ಶಾಂತಿಯನ್ನು ನೆಲೆಸುವಲ್ಲಿ ಭಾರತ ಉತ್ತಮ ಪಾತ್ರವನ್ನು ನಿರ್ವಹಿಸುತ್ತಿದೆ, ಆದ್ದರಿಂದ ನಮ್ಮ ದೇಶದ ಆಂತರಿಕ ಸಮಸ್ಯೆಗಳನ್ನು ನ್ಯಾಯಾಲಯದ ಬದಲು ಹೊರಗೆ ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ, ವಾಸ್ತವವೆಂದರೆ ಕಾಯ್ದೆಯ ನಿಬಂಧನೆಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ಬಳಿಕ ಕಾನೂನಿನಲ್ಲಿ ಭಾರತೀಯ ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ, ತೊಂದರೆಯೂ ಇದು ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ವಲಸಿಗರಿಗೆ ಈ ಕಾಯ್ದೆ ಪ್ರಯೋಜನವನ್ನು ನೀಡುತ್ತದೆ. ಇದು ಯಾರೊಬ್ಬ ಭಾರತೀಯರ ಪೌರತ್ವವನ್ನು ಕಸಿದುಕೊಳ್ಳಲು ಹೋಗುವುದಿಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: Mudigere: ಖಾರದ ಪುಡಿ ಎರಚಿ ತೋಟದ ಮನೆ ದರೋಡೆ ಪ್ರಕರಣ; ಪೊಲೀಸರಿಂದ ಐವರ ಬಂಧನ