ನಿರ್ದೇಶಕ ನಾಗರಾಜ್ ಸೋಮಯಾಜಿ ಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಅಕಟಕಟ’ ಸಿನಿಮಾ ಅಂಗಳಕ್ಕೆ ಮತ್ತೂಬ್ಬ ನಟಿಯ ಆಗಮನವಾಗಿದೆ.
ಕೆಲ ದಿನಗಳ ಹಿಂದಷ್ಟೇ ನಾಯಕಿ ಚೈತ್ರಾ ಆಚಾರ್ ಪರಿಚಯಿಸಿದ್ದ ಚಿತ್ರತಂಡ ಈಗ ನಟಿ ಹಾಗೂ ರಂಗಭೂಮಿ ಕಲಾವಿದೆಯೂ ಆಗಿರುವ ಶ್ವೇತಾ ಶ್ರೀನಿವಾಸ್ ಪಾತ್ರದ ಬಗ್ಗೆ ಮಾಹಿತಿ ನೀಡಿದೆ. ಕಳೆದ 20 ವರ್ಷಗಳಿಂದ ಕನ್ನಡ
ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರಪ್ರಶಸ್ತಿ ಪಡೆದಿರುವ ಶ್ವೇತಾ, “ಪಂಚರಂಗಿ’, ”ಟೋನಿ ’, “ದ್ಯಾವ್ರೇ ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಶ್ವೇತಾ ಈಗ ಅಕಟಕಟ ಸಿನಿಮಾದಲ್ಲಿ ವನಜಾ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ತಮ್ಮ ಪಾತ್ರದ ಬಗ್ಗೆ ಹೆಚ್ಚಾಗಿ ಗುಟ್ಟುಬಿಟ್ಟು ಕೊಡದ ಶ್ವೇತಾ, ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನುಆಯ್ಕೆ ಮಾಡಿಕೊಳ್ಳುತ್ತೇನೆ. ಇದೊಂದು ಚಾಲೆಂಜಿಂಗ್‌ಪಾತ್ರ. ಅಪರೂಪದ ಕಥೆಯ ನೆಲ ಮೂಲದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ ಎನ್ನುತ್ತಾರೆ.